<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಶಿವಮೊಗ್ಗ ಜಿಲ್ಲೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಉಸ್ತುವಾರಿ ಸಚಿವರಿಂದ ಸಿಎಂ ರಿಗೆ ಮನವಿ

Banner Ad
ಶಿವಮೊಗ್ಗ ಜಿಲ್ಲೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಉಸ್ತುವಾರಿ ಸಚಿವರಿಂದ ಸಿಎಂ ರಿಗೆ ಮನವಿ

ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮನವಿ ಸಲ್ಲಿಸಿ ಆಗ್ರಹಿಸಿದರು.

ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಲಕ್ಷಾಂತರ ಜನರಿಗೆ ಸುಲಭವಾಗಿ, ಶೀಘ್ರವಾಗಿ ಹಾಗೂ ಕೈಗೆಟುಕುವ ವೆಚ್ಚದಲ್ಲಿ ನ್ಯಾಯಾಲಯದ ಸೌಲಭ್ಯ ತಲುಪಿಸಲು ಶಿವಮೊಗ್ಗ ಜಿಲ್ಲೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠದ ಅಗತ್ಯತೆ ಕುರಿತಂತೆ ಸಿ.ಎಂ. ಅವರಿಗೆ ಮನವರಿಕೆ ಮಾಡಿದರು.

ನ್ಯಾಯ ಮೂರ್ತಿ ಜಸ್ವಂತ್ ಸಿಂಗ್ ಸಮಿತಿಯ ಮಾರ್ಗ ಸೂಚಿಗಳ ಅನ್ವಯ ಶಿವಮೊಗ್ಗದಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಎಲ್ಲಾ ಅರ್ಹತೆಗಳಿದ್ದು, ಈ ಭಾಗದ ಜನ ಪ್ರತಿನಿಧಿಗಳು, ಸಂಘ ಸಂಸ್ಥೆಗಳು ಹಾಗೂ ವಕೀಲರ ಸಂಘದ ಆಗ್ರಹವೂ ಸಹ ಇರುತ್ತದೆ. ಸಾರ್ವಜನಿಕರ ಹಿತದೃಷ್ಠಿ ಪರಿಗಣಿಸಿ, ಮಧ್ಯ ಕರ್ನಾಟಕ ಭಾಗದ ಕೇಂದ್ರ ಸ್ಥಾನವಾದ ಶಿವಮೊಗ್ಗದಲ್ಲಿ ಉಚ್ಚ ನ್ಯಾಯಾಲಯದ ಸಂಚಾರಿ ಪೀಠ ಸ್ಥಾಪನೆ ಸ್ಥಾಪಿಸಲು ಕೋರಿದ್ದಾರೆ.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಕೆ. ಬಸಪ್ಪಗೌಡ, ಜಿ.ಆರ್. ರಾಘವೇಂದ್ರ, ಕೆ.ಪಿ. ಶ್ರೀಪಾಲ, ಲಕ್ಷ್ಮೀಕಾಂತ ಚಿಮನೂರು, ಶ್ರೀ ನಿವಾಸ, ಹಾಗೂ ಹೈ ಕೋರ್ಟ್ ವಕೀಲರಾದ ಹರೀಶ್, ಎಸ್.ವಿ. ಪ್ರಕಾಶ್, ಚಂದ್ರಕಾಂತ್ ಪಾಟೀಲ್, ಅನಿತಾ ಪಾಟೀಲ್ ಇದ್ದರು

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *