<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಅತ್ಯಾಚಾರದಂತಹ ಸೂಕ್ಷ್ಮ ಪ್ರಕರಣದಲ್ಲೂ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿದ ಸಿಎಂ ವಿಜಯ್

Banner Ad
ಅತ್ಯಾಚಾರದಂತಹ ಸೂಕ್ಷ್ಮ ಪ್ರಕರಣದಲ್ಲೂ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿದ ಸಿಎಂ ವಿಜಯ್

ಚೆನ್ನೈ :- ​ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಹತ್ತು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆದರೆ, ಇಂತಹ ಅತ್ಯಂತ ಸೂಕ್ಷ್ಮ ಹಾಗೂ ದಾರುಣ ಘಟನೆಯ ತನಿಖೆ ನಡೆಸುವಾಗ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಮೂವರು ಐಪಿಎಸ್ ಅಧಿಕಾರಿಗಳು ನಡೆದುಕೊಂಡ ರೀತಿ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿಜಯ್ ಅವರು ಆ ಮೂವರನ್ನೂ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶಿಸಿದ್ದಾರೆ.

​ಅತ್ಯಂತ ಕ್ರೂರವಾಗಿ ಅತ್ಯಾಚಾರ ನಡೆಸಿ ಕೊಂದಿದ್ದ ದುಷ್ಕರ್ಮಿಗಳು :​

ಕೋಯಂಬತ್ತೂರು ಜಿಲ್ಲೆಯಲ್ಲಿ 10 ವರ್ಷದ ಬಾಲಕಿಯೊಬ್ಬಳನ್ನು ದುಷ್ಕರ್ಮಿಗಳು ಅಪಹರಿಸಿ, ಅತ್ಯಂತ ಕ್ರೂರವಾಗಿ ಅತ್ಯಾಚಾರ ನಡೆಸಿ ಕೊಂದಿದ್ದರು. ಈ ಘಟನೆ ತಮಿಳುನಾಡಿನಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಮುಖ್ಯಮಂತ್ರಿ ವಿಜಯ್ ಅವರ ಕಟ್ಟುನಿಟ್ಟಿನ ಆದೇಶದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದರು.

​ಇದರ ಬೆನ್ನಲ್ಲೇ, ಪ್ರಕರಣದ ವಿವರಗಳನ್ನು ಮಾಧ್ಯಮಗಳಿಗೆ ತಿಳಿಸಲು ಒಬ್ಬರು ಮಹಿಳಾ ಐಜಿ (IG) ಅಧಿಕಾರಿ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳು ಜಂಟಿ ಪತ್ರಿಕಾಗೋಷ್ಠಿ ಕರೆದಿದ್ದರು. ಆದರೆ, ಸುದ್ದಿಗೋಷ್ಠಿ ಆರಂಭವಾಗುವ ಮುನ್ನ ಈ ಮೂವರು ಅಧಿಕಾರಿಗಳು ಅತ್ಯಂತ ಬೇಜವಾಬ್ದಾರಿಯಿಂದ ಒಬ್ಬರಿಗೊಬ್ಬರು ಜೋಕ್ ಮಾಡುತ್ತಾ, ನಗುತ್ತಾ ಕಾಲ ಕಳೆದಿದ್ದಾರೆ. ವಿಶೇಷವಾಗಿ ಆ ಮಹಿಳಾ ಐಜಿ ಅಧಿಕಾರಿ, ಸಂತ್ರಸ್ತೆಯ ನೋವನ್ನು ಮರೆತು ನಗುನಗುತ್ತಾ ಮುಖದ ಮೇಲೆ ಯಾವುದೇ ಗಂಭೀರತೆ ಇಲ್ಲದೆ ವರ್ತಿಸಿದ್ದಾರೆ.

ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆ ಭಾರಿ ಆಕ್ರೋಶ :

​ಈ ಅಧಿಕಾರಿಗಳು ನಗುತ್ತಿರುವ ದೃಶ್ಯಗಳು ಮಾಧ್ಯಮಗಳು ಮತ್ತು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆ ನೆಟಿಜನ್‌ಗಳು ಭಾರಿ ಆಕ್ರೋಶ ವ್ಯಕ್ತಪಡಿಸಿದರು.
​”ಒಂದು ಮಗು ಸತ್ತಾಗಲೂ ನಿಮಗೆ ಕನಿಷ್ಠ ಮಾನವೀಯತೆ ಇಲ್ಲವೇ? ನೀವೂ ಒಬ್ಬ ಮಹಿಳೆ, ನಿಮಗೂ ಮಕ್ಕಳಿರಬಹುದು. ನಿಮ್ಮ ಸ್ವಂತ ಮಗಳಿಗೆ ಹೀಗಾಗಿದ್ದರೆ ಹೀಗೆಯೇ ನಗುತ್ತಿದ್ದಿರಾ?” ಎಂದು ಸಾರ್ವಜನಿಕರು ಆ ಐಜಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ಗಮನಕ್ಕೆ ಬರುತ್ತಿದ್ದಂತೆ​ತಕ್ಷಣವೇ ಆ್ಯಕ್ಷನ್ ತಗೊಂಡ ಸಿಎಂ ವಿಜಯ್ :

​ಈ ವಿಷಯ ಮುಖ್ಯಮಂತ್ರಿ ವಿಜಯ್ ಅವರ ಗಮನಕ್ಕೆ ಬರುತ್ತಿದ್ದಂತೆ ಅವರು ಕಠಿಣ ನಿರ್ಧಾರ ಕೈಗೊಂಡಿದ್ದಾರೆ. ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿತನ ತೋರಿದ ಆ ಮೂವರೂ ಐಪಿಎಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

​ವಿಜಯ್ ನಿರ್ಧಾರಕ್ಕೆ ದೇಶಾದ್ಯಂತ ಶ್ಲಾಘನೆ :

​ಮುಖ್ಯಮಂತ್ರಿ ವಿಜಯ್ ಅವರ ಈ ತ್ವರಿತ ಮತ್ತು ಕಠಿಣ ನಿರ್ಧಾರಕ್ಕೆ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬೇರೆ ರಾಜ್ಯಗಳ ಮುಖ್ಯಮಂತ್ರಿಗಳೂ ವಿಜಯ್ ಅವರ ಈ ನಡೆಯನ್ನು ನೋಡಿ ಕಲಿಯಬೇಕು ಎಂದು ನೆಟಿಜನ್‌ಗಳು ಕೊಂಡಾಡುತ್ತಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳಿಗೆ ತಕ್ಕ ಶಾಸ್ತಿ ಮಾಡಿದ್ದರಿಂದ, ಮುಂದಿನ ದಿನಗಳಲ್ಲಾದರೂ ಪೊಲೀಸರು ಸಾರ್ವಜನಿಕರೊಂದಿಗೆ ಮತ್ತು ಇಂತಹ ಪ್ರಕರಣಗಳಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಕಲಿಯುತ್ತಾರೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *