<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಸೈಕ್ಲೋನ್ ಮಳೆಗೆನೇ ಭರ್ತಿಯಾದ ತುಂಗಾ ಡ್ಯಾಂ : ನೀರು ಬಿಡಲು ಕ್ಷಣಗಣನೆ

Banner Ad
ಸೈಕ್ಲೋನ್ ಮಳೆಗೆನೇ ಭರ್ತಿಯಾದ ತುಂಗಾ ಡ್ಯಾಂ : ನೀರು ಬಿಡಲು ಕ್ಷಣಗಣನೆ

ಶಿವಮೊಗ್ಗ :- ತುಂಗಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇದ್ದು, ಒಳ ಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನೀರನ್ನು ಬಿಡುವ ಸಂಭವವಿದೆ.

ಆದ್ದರಿಂದ ತುಂಗಾ ಜಲಾಶಯದ ಕೆಳಭಾಗದ ನದಿ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರಿಗೆ ನದಿ ಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ದನಕರುಗಳನ್ನು, ಪ್ರಾಣಿಗಳನ್ನು ಮೇಯಲು ಬಿಡುವ ಯಾವುದೇ ಚಟುವಟಿಕೆಗಳನ್ನು ಮಾಡದೇ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕರ್ನಾಟಕ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಮುನ್ನೆಚ್ಚರಿಕೆ ನೀಡಿದ್ದಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *