<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್

Banner Ad
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು :- ಇಂದು ಸಂಜೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.

ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಂದ ಪಟಾಕಿ ಸಿಡಿಸುವಿಕೆ ಮತ್ತು ಜೋರಾದ ಹರ್ಷೋದ್ಗಾರಗಳ ನಡುವೆ ಡಿಕೆ ಶಿವಕುಮಾರ್ ಅವರು ಸಂಜೆ 4.15ಕ್ಕೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಭಾರತದ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಪ್ರಮಾಣ ವಚನ ಸ್ವೀಕರಿಸಿದರು ಮತ್ತು ಅಜ್ಜಯ್ಯ ಸ್ವಾಮೀಜಿಯವರ ಛಾಯಾಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಡಿಕೆಶಿ ತಮ್ಮ ಆಧ್ಯಾತ್ಮಿಕ ಗುರು ವೀರಗಂಗಾಧರಾಚಾರ್ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಡಿಕೆ ಶಿವಕುಮಾರ್ ಬೆನ್ನಲ್ಲೇ ಡಾ. ಜಿ ಪರಮೇಶ್ವರ್, ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೋಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯುಟಿ ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್ ಮತ್ತು ಶರಣ ಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *