ಮುಂಬೈ :- ನಿನ್ನೆ ನಡೆದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ಸಾವು ದೇಶದ ರಾಜಕೀಯ ವಲಯದಲ್ಲಿ ಆಘಾತ ಮೂಡಿಸಿದೆ. ವಿಮಾನ ಅಪಘಾತವೇ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದ್ದರು, ಈ ಅಪಘಾತದ ಹಿಂದೆ ನಿಖರವಾಗಿ ಏನಾಯಿತು ಎಂಬ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ.
ಈ ನಡುವೆ ಅಜಿತ್ ಪವಾರ್ ಸಾವಿನ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದೆ. ಅಜಿತ್ ಪವಾರ್ ಅವರು ಪ್ರಯಾಣಿಸಿದ್ದ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ದೃಢಪಡಿಸಿದೆ.
ವಿಮಾನ ಅಪಘಾತದ ತನಿಖೆಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಹಾಗೂ ವಿಧಿವಿಜನ ತಂಡಗಳ ಅಧಿಕಾರಿಗಳು ಇಂದು ಬಾರಾಮತಿಯಲ್ಲಿ ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆ ವೇಳೆ ವಿಮಾನದಲ್ಲಿದ್ದ ಕಪ್ಪು ಪೆಟ್ಟಿಗೆಯೂ ಈಗ ಪತ್ತೆಯಾಗಿದ್ದು, ತನಿಖಾಧಿಕಾರಿಗಳು ಅದನ್ನು ಡಿಕೋಡ್ ಮಾಡುವ ಪ್ರಕ್ರಿಯೆ ಆರಂಭಿಸಿದ್ದಾರೆ.
ಈ ಕಪ್ಪು ಪೆಟ್ಟಿಗೆಯಲ್ಲಿ ಎರಡು ಮುಖ್ಯ ಭಾಗಗಳಿವೆ. ಒಂದು ಫ್ಲೈಟ್ ಡೇಟಾ ರೆಕಾರ್ಡರ್ (ಎಫ್‌ಡಿಆರ್) ಇದು ವಿಮಾನದ ವೇಗ, ಎತ್ತರ, ಇಂಧನ ಬಳಕೆ, ದಿಕ್ಕು ಸೇರಿದಂತೆ ತಾಂತ್ರಿಕ ಮಾಹಿತಿಯನ್ನು ದಾಖಲಿಸುತ್ತದೆ.
ಮತ್ತೊಂದು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಇದು ಪೈಲಟ್‌ಗಳ ನಡುವಿನ ಸಂಭಾಷಣೆ, ಎಚ್ಚರಿಕೆ ಧ್ವನಿಗಳು ಮತ್ತು ಅಪಘಾತದ ಕೊನೆಯ ಕ್ಷಣಗಳ ಶಬ್ದಗಳನ್ನು ದಾಖಲಿಸುತ್ತದೆ. ಈ ಡೇಟಾವನ್ನು ವಿಶ್ಲೇಷಿಸಲು ಕನಿಷ್ಠ ೩ ರಿಂದ ೪ ವಾರಗಳು ಬೇಕಾಗುತ್ತದೆ ಎಂದು ಅಧಿಕಾರಿಗಳು ನೀಡಿದ್ದಾರೆ.


