<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಜೂ. 14ರಂದು ಜೆ.ಎನ್.ಎನ್.ಸಿ.ಇ ನಲ್ಲಿ  ಸಿಇಟಿ, ಕಾಮೆಡ್-ಕೆ ವಿಶೇಷ ಸಂವಾದ

Banner Ad
ಜೂ. 14ರಂದು ಜೆ.ಎನ್.ಎನ್.ಸಿ.ಇ ನಲ್ಲಿ ಸಿಇಟಿ, ಕಾಮೆಡ್-ಕೆ ವಿಶೇಷ ಸಂವಾದ

ಶಿವಮೊಗ್ಗ: ನಗರದ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 14ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಎಂ.ಬಿ.ಎ.–ಎಂ.ಸಿ.ಎ. ಸಭಾಂಗಣದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯ ನೇರ ಪ್ರಾತ್ಯಕ್ಷಿಕೆ ನಡೆಯಲಿದ್ದು, ವಿವಿಧ ಇಂಜಿನಿಯರಿಂಗ್ ವಿಭಾಗಗಳ ಪರಿಚಯ, ಉದ್ಯೋಗಾವಕಾಶಗಳು, ವಿದ್ಯಾರ್ಥಿವೇತನಗಳು ಹಾಗೂ ಬ್ಯಾಂಕ್‌ಗಳಲ್ಲಿ ಲಭ್ಯವಿರುವ ಶಿಕ್ಷಣ ಸಾಲದ ಸೌಲಭ್ಯಗಳ ಕುರಿತು ತಜ್ಞರು ಸಮಗ್ರ ಮಾಹಿತಿ ನೀಡಲಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಕಾರ್ಯಕ್ರಮಕ್ಕೆ ಭಾಗವಹಿಸಲು ಅನುಕೂಲವಾಗುವಂತೆ, ಮಹಾವೀರ ಸರ್ಕಲ್ ಹಾಗೂ ಬಸ್ ನಿಲ್ದಾಣದಿಂದ ಜೆ.ಎನ್.ಎನ್.ಸಿ.ಇ. ಕಾಲೇಜಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 96324 71667 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಲಾಗಿದೆ.
Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *