<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ನೀಟ್ ಪರೀಕ್ಷೆಯಲ್ಲಿನ ಅಕ್ರಮ ವಿರೋಧಿಸಿ ಎನ್‌ಎಸ್‌ಯುಐ ಪ್ರತಿಭಟನಾ ಮೆರವಣಿಗೆ : ಬಹಿರಂಗ ಸಭೆ

Banner Ad
ನೀಟ್ ಪರೀಕ್ಷೆಯಲ್ಲಿನ ಅಕ್ರಮ ವಿರೋಧಿಸಿ ಎನ್‌ಎಸ್‌ಯುಐ ಪ್ರತಿಭಟನಾ ಮೆರವಣಿಗೆ : ಬಹಿರಂಗ ಸಭೆ

ಶಿವಮೊಗ್ಗ :- ನೀಟ್ ಪರೀಕ್ಷೆಯಲ್ಲಿನ ಅಕ್ರಮಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಎನ್‌ಎಸ್‌ಯುಐ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ನಗರದಲ್ಲಿಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನೀಟ್ ರದ್ದುಗೊಳಿಸಿ, ಸಿಇಟಿ ಜರಿಗೆ ತನ್ನಿ ಎನ್ನುವ ಘೋಷಣೆಯೊಂದಿಗೆ ನಗರದ ಸೈನ್ಸ್ ಮೈದಾನ ಹಾಗೂ ಬಸ್ ನಿಲ್ದಾಣದಿಂದ ಗೋಪಿ ವೃತ್ತದವರೆಗೂ ಎರಡು ಪ್ರತ್ಯೇಕ ಮೆರವಣಿಗೆಯ ಮೂಲಕ ಬಂದ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಚೆಲ್ಲಾಟವಾ ಡುವುದನ್ನು ನಿಲ್ಲಿಸಿ ಎಂದು ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನಾ ಮೆರವಣಿಗೆ ನಂತರ ಗೋಪಿ ವೃತ್ತದಲ್ಲಿ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ, ಸಿಇಟಿ ಜರಿಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಗಡೆದ ಬಹಿರಂಗ ಸಭೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಾಜಿ ಸಂಸದ ಆಯನೂರು ಮಂಜುನಾಥ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್, ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಬಿ.ವಿ. ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಚೇತನ್ ಗೌಡ, ಶ್ವೇತಾ ಬಂಡಿ, ಶ್ರೀನಿವಾಸ್, ವಿಜಯಕುಮರಾ ಪ್ರಸನ್ನ ಕುಮಾರ್, ಎಸ್. ರವಿಕುಮಾರ್, ಹೆಚ್.ಸಿ. ಯೊಗೀಶ್, ಕೆ.ದೇವೇಂದ್ರಪ್ಪ, ಶರತ್, ಮಧುಸುದನ್, ಚಿನ್ನಪ್ಪ, ಮಂಜುನಾಥ್ ಇನ್ನಿತರರಿದ್ದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *