
ಶಿವಮೊಗ್ಗ : ಮಕ್ಕಳಿಗೆ ಕನ್ನಡ ಪಠ್ಯದ ಮೂಲಕ ಭಾಷೆ, ಸಾಹಿತ್ಯದ ಅಭಿರುಚಿ ಮೂಡಿಸುವ ಸಲುವಾಗಿ ಪ್ರತಿ ವರ್ಷದಂತೆ ಕಥೆ, ಕವನ, ಪ್ರಬಂಧ ರಚನಾ ಕಮ್ಮಟ ಏರ್ಪಡಿಸಲಾಗುವುದು. ಜುಲೈ 4ರ ನಾಳೆ ಶನಿವಾರ ಬೆಳಿಗ್ಗೆ ಅನುಪಿನಕಟ್ಟೆ ಯಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ವಸತಿ ಶಾಲಾ ಸಭಾಂಗಣದಲ್ಲಿ ಇಡೀ ದಿವಸ ಕಮ್ಮಟ ನಡೆಯಲಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷರಾದ ಡಿ. ಮಂಜುನಾಥ ಉದ್ಘಾಟಿಸಲಿದ್ದಾರೆ. ಶ್ರೀ ರಾಮಕೃಷ್ಣ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಶೋಭಾ ವೆಂಕಟರಮಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಸಾಹಿತಿಗಳು, ವಿಶ್ರಾಂತ ಪ್ರಾಂಶುಪಾಲರಾದ ಡಾ. ಎಚ್. ಟಿ. ಕೃಷ್ಣಮೂರ್ತಿ, ವಿಶ್ರಾಂತ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ. ಕೆ. ನಾಗೇಂದ್ರಪ್ಪ ನವರು, ಕಥೆಗಾರ ಡಾ||ನಾಗೇಂದ್ರ ಆಚಾರ್ಯ ಅವರು ಭಾಗವಹಿಸಲಿದ್ದಾರೆ.
ಜಿಲ್ಲೆಯಾದ್ಯಂತ ಹಲವು ಶಾಲಾ ಕಾಲೇಜು ಅಂಗಳದಲ್ಲಿ ಈ ಕಾರ್ಯಕ್ರಮ ಮಾಡಲು ಯೋಜಿಸಲಾಗಿದೆ. ಈ ಬಾರಿ ನಡೆಯಲಿರುವ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರಕವಾಗಿ ಈ ಕಮ್ಮಟಗಳು ನಡೆಯಲಿವೆ. ಮಕ್ಕಳಿಗೆ ಕನ್ನಡ ಭಾಷೆ, ಸಾಹಿತ್ಯ ಆಸಕ್ತಿ ಮೂಡಿಸುವ ಸಲುವಾಗಿ ನಿರಂತರ ಕಾರ್ಯಚಟುವಟಿಕೆ ಗಳನ್ನು ನಡೆಸಲಾಗುವುದು ಎಂದು ಡಿ. ಮಂಜುನಾಥ ತಿಳಿದಿದ್ದಾರೆ.
ಇಲಾಖೆಯ ಸಹಕಾರ ಕೋರಿದ್ದೇವೆ. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕನ್ನಡ ಭಾಷೆ ಪರಿಣಾಮಕಾರಿಯಾಗಿ ಕಲಿಸುವ ವಿಚಾರದಲ್ಲಿ ಕಮ್ಮಟ ಏರ್ಪಡಿಸಲು ಪ್ರಯತ್ನ ಮಾಡಿದ್ದೇವೆ. ಶಿವಮೊಗ್ಗ ತಾಲ್ಲೂಕು ಮೊದಲು ಪ್ರಯೋಗವಾಗಿ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.



