<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಜುಲೈ 7ರಿಂದ ನಾಲ್ಕು ದಿನಗಳ ಕಾಲ ಉಡುಪಿ- ಶಿವಮೊಗ್ಗದಲ್ಲಿ ಅಬ್ಬರದ ಮಳೆ ಮುನ್ಸೂಚನೆ

Banner Ad
ಜುಲೈ 7ರಿಂದ ನಾಲ್ಕು ದಿನಗಳ ಕಾಲ ಉಡುಪಿ- ಶಿವಮೊಗ್ಗದಲ್ಲಿ ಅಬ್ಬರದ ಮಳೆ ಮುನ್ಸೂಚನೆ

ಬೆಂಗಳೂರು :- ರಾಜ್ಯದಲ್ಲಿ  ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವಿಪರೀತ ವರ್ಷಧಾರೆಯಾಗುತ್ತಿದೆ. ಈ ನಡುವೆ ಜುಲೈ 9ರಿಂದ 11ರ ವರೆಗೆ ಕರಾವಳಿಯಲ್ಲಿ, ಜುಲೈ 9ರಂದು ದಕ್ಷಿಣ ಒಳನಾಡು ಭಾಗದಲ್ಲಿ ಮತ್ತು ಜುಲೈ 8ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈ ಪೈಕಿ ಉತ್ತರ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿಪರೀತ ಮಳೆಯ ಜೊತೆಗೆ ಗಂಟೆಗೆ 50-60 ಕಿಲೋ ಮೀಟರ್​​ ವೇಗದಲ್ಲಿ ಗಾಳಿಯ ಅಬ್ಬರವೂ ಇರಲಿದೆ ಎಂದು ಇಲಾಖೆ ಎಚ್ಚರಿಸಿದೆ.

ಕರಾವಳಿ ಭಾಗದ ಉತ್ತರ ಕನ್ನಡ ಮತ್ತು ಉಡುಪಿಗೆ ನಾಳೆ ರೆಡ್​​ ಅಲರ್ಟ್​​ ನೀಡಲಾಗಿದ್ದು, ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಮಳೆಯಬ್ಬರದ ನಿರೀಕ್ಷೆ ಇದೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *