<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಆಹ್ವಾನ

Banner Ad
ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಆಹ್ವಾನ

ಶಿವಮೊಗ್ಗ :- ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರ ಆದೇಶದನ್ವಯ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹಾಗೂ ಫಾರ್ಮಸಿ ಅಧಿಕಾರಿಗಳ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮಾತ್ರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳ ಒಟ್ಟು 18 ಹುದ್ದೆಗಳಿದ್ದು, ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಡಿಪ್ಲೋಮಾ ಇನ್ ಲ್ಯಾಬೋರೇಟರಿ ತಾಂತ್ರಿಕ ವಿದ್ಯಾರ್ಹತೆ ಪಡೆದಿರಬೇಕು.
ಫಾರ್ಮಸಿ ಅಧಿಕಾರಿಗಳು ಒಟ್ಟು 24 ಹುದ್ದೆಗಳಿದ್ದು, ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಡಿ.ಫಾರ್ಮಾ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಕರ್ನಾಟಕ ಫಾರ್ಮಸಿ ಕೌನ್ಸಿಲಿಂಗ್‌ನಲ್ಲಿ ನೋಂದಣಿಯಾಗಿರಬೇಕು.

ಅರ್ಹ ಅಭ್ಯರ್ಥಿಗಳು ಜು. 16ರ ಬೆಳಿಗ್ಗೆ 10.30 ರಿಂದ ಜು. 25ರ ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಈ ಎರಡು ಹುದ್ದೆಗಳಿಗೆ ಸಂಬಂಧಪಟ್ಟ ಅರ್ಜಿ ನಮೂನೆಯನ್ನು ಕಚೇರಿ ಅವಧಿಯಲ್ಲಿ ‘ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್. ರಸ್ತೆ, ಶಿವಮೊಗ್ಗ’ ಇಲ್ಲಿ ಪಡೆದುಕೊಳ್ಳಲು ಸೂಚಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ. 08182-222382 ಅಥವಾ ಇಮೇಲ್ ಐಡಿ dhoshimoga @gmail.com ಅನ್ನು ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *