<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ನಿಧನ

Banner Ad
ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು :- ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ()85 ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾದರು.

ಚೆನ್ನಮ್ಮ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆರೋಗ್ಯ ಏರುಪೇರಾದ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ವೇಳೆಯೇ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಇದೀಗ ಮಣಿಪಾಲ್ ಆಸ್ಪತ್ರೆಯಲ್ಲಿಯೇ ಚೆನ್ನಮ್ಮ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಎರಡು ದಿನಗಳಿಂದ ಚೆನ್ನಮ್ಮ ಆರೋಗ್ಯದ ಸ್ಥಿತಿ ಗಂಭೀವಾಗಿದೆ ಎಂದು ಹೇಳಲಾಗಿತ್ತು. ಆದರೆ ಇಂದು ಬೆಳಿಗ್ಗೆ ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ.ಸತ್ಯನಾರಾಯಣ ಚೆನ್ನಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿ ಅವರ ಆರೋಗ್ಯದಲ್ಲಿ ಶುಕ್ರವಾರಕ್ಕಿಂತ ಇಂದು ಸುಧಾರಣೆ ಕಂಡುಬಂದಿದೆ ಎಂದು ತಿಳಿಸಿದ್ದರು. ಆದರೆ ಇದೀಗ ಚೆನ್ನಮ್ಮ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಿಂದ ದೇವೇಗೌಡರಿಗೆ ಆಘಾತ :

ಚಿನ್ನಮ್ಮ ಅವರು ಚಿಕಿತ್ಸೆಗೆ ಸ್ಪಂದಿಸಿ ಚೇತರಿಸಿಕೊಂಡಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಅವರು ಇಂದು ಸಂಜೆ ಹೊತ್ತಿಗೆ ನಿಧನರಾದರು. ತಮ್ಮ ಪತ್ನಿ ನಿಧನ ವಿಷಯ ತಿಳಿದ ಮಾಜಿ ಪ್ರಧಾನಿ ದೇವೇಗೌಡ ಅವರು ಆಘಾತಗೊಂಡು ಗದ್ಗತಿತರಾದರು.

ಮೃತರು ಪತಿ ದೇವೇಗೌಡರು, ಪುತ್ರರಾದ ಕುಮಾರ ಸ್ವಾಮಿ, ರೇವಣ್ಣ, ಸೊಸೆಯಂದಿರು, ಮೊಮ್ಮಕ್ಕಳ್ಳು ಹಾಗೂ ಕುಟುಂಬದವರನ್ನು ಅಗಲಿದ್ದಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *