<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಅಪಾರ ಬೆಂಬಲಿಗರೊಂದಿಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮುಖಂಡ ಸುನಿಲ್ ಅರ್ಜಿ

Banner Ad
ಅಪಾರ ಬೆಂಬಲಿಗರೊಂದಿಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮುಖಂಡ ಸುನಿಲ್ ಅರ್ಜಿ

ಶಿವಮೊಗ್ಗ :- ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಸಿ ಕಾಂಗ್ರೆಸ್ ಮುಖಂಡ ಸುನೀಲ್ ಅವರು ಜುಲೈ 31 ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಟಿ. ಹಾಲಪ್ಪ ಅವರಿಗೆ ಅರ್ಜಿ ಸಲ್ಲಿಸಿದರು.

ಅರ್ಜಿ ಸಲ್ಲಿಕೆಗೂ ಮುನ್ನ ಸುನೀಲ್ ಅವರು ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಶಕ್ತಿ ಪ್ರದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶ್ರೀಧರಮೂರ್ತಿ ನವಲೆ, ಮಧೂಸೂದನ ಎಸ್ ಬಿ, ಯುವ ಕಾಂಗ್ರೆಸ್ ಮುಖಂಡರಾದ ವಿನಯ್ ತಾಂದ್ಲೆ, ಪ್ರಮುಖರಾದ ಮಲ್ಲಿಕಾರ್ಜುನ್, ಮದನ್ ಕುಮಾರ್, ವಿನೋದ್ ಕುಮಾರ್, ಕೇಶವ್, ಅಶೋಕ್, ಸತೀಶ್, ಆಶೀಶ್, ವೈ ಎಸ್ ಕುಮಾರ್ ಮೊದಲಾದವರಿದ್ದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *