ಶಿವಮೊಗ್ಗ :- ಸಿಗಂದೂರು ದೇವಿ ದರ್ಶನಕ್ಕೆಂದು ಬೆಂಗಳೂರಿನಿಂದ ಶಿವಮೊಗ್ಗ ಮೂಲಕ ಸಾಗರ ಮಾರ್ಗವಾಗಿ ಹೋಗುತ್ತಿದ್ದ ಕಾರು ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚೋರಡಿ ಗ್ರಾಮದ ಕುಮಧ್ವತಿ ಸೇತುವೆ ಬಳಿ ನಡೆದಿದೆ.
ಕಾರಿನಲ್ಲಿ ಆರು ಜನರು ಬೆಂಗಳೂರಿನಿಂದ ಸಿಗಂದೂರು ಕಡೆ ಪ್ರಯಾಣಿಸುತ್ತಿದ್ದಾಗ, ಚೋರಡಿ ಬ್ರಿಡ್ಜ್ ಸಮೀಪ ರಸ್ತೆ ಬದಿಯ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ, ನಿಯಂತ್ರಣ ಕಳೆದುಕೊಂಡು ಮೂರು ಬಾರಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಇದೇ ವೇಳೆ ಕರ್ತವ್ಯದ ನಿಮಿತ್ತ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಸಾಗರ ಪೇಟೆ ಠಾಣೆ ಪೊಲೀಸ್ ಸಿಬ್ಬಂದಿಯ ವಾಹನ ಇದೇ ಮಾರ್ಗದಲ್ಲಿ ಸಾಗುತ್ತಿತ್ತು. ಅಪಘಾತ ಸಂಭವಿಸಿದ ಸ್ಥಳಕ್ಕೆ ಒಂದೆರಡು ನಿಮಿಷ ಮುಂಚಿತವಾಗಿ ತಲುಪಿದ್ದರೆ, ಪಲ್ಟಿಯಾದ ಕಾರು ತಮ್ಮ ವಾಹನಕ್ಕೂ ಡಿಕ್ಕಿ ಹೊಡೆಯುವ ಸಾಧ್ಯತೆ ಇತ್ತು ಎಂದು ಎಎಸ್‌ಐ ಮೀರಾಬಾಯಿ ಅವರು ತಿಳಿಸಿದ್ದಾರೆ.


