<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಶಿವಪ್ಪ ನಾಯಕ ವೃತ್ತದಲ್ಲಿ ಕಿಸಾನ್ ಮೋರ್ಚಾ ಸಂಘಟನೆಗಳಿಂದ ರಸ್ತೆ ತಡೆ

Banner Ad
ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಶಿವಪ್ಪ ನಾಯಕ ವೃತ್ತದಲ್ಲಿ ಕಿಸಾನ್ ಮೋರ್ಚಾ ಸಂಘಟನೆಗಳಿಂದ ರಸ್ತೆ ತಡೆ

ಶಿವಮೊಗ್ಗ :- ನವ ವಸಹಾತುಶಾಹಿ ಕಾರ್ಪೋರೇಟ್ ಆಳ್ವಿಕೆ ವಿರುದ್ದ ಕಾರ್ಪೋರೇಟ್‌ಗಳೇ ದೇಶ ಬಿಟ್ಟು ತೊಲಗಿ ಎಂಬ ಘೋಷಣೆಯಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಇಂದು ಶಿವಪ್ಪನಾಯಕ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ ಚಳವಳಿ ಹಮ್ಮಿಕೊಳ್ಳಲಾಗಿತ್ತು.

ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ವಾಹನದಲ್ಲಿ ಕರೆದೊಯ್ದ ಘಟನೆಯೂ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರ ಒಂದೆಡೆ ರೈತ ವಿರೋಧಿ, ಕಾರ್ಮಿಕ ವಿರೋಧಿ, ದಲಿತ ವಿರೋಧಿ, ಮಹಿಳಾ ವಿರೋಧಿ ಒಟ್ಟಾರೆ ಜನ ವಿರೋಧಿ ಕಾನೂನುಗಳನ್ನು, ನೀತಿಗಳನ್ನು ಜರಿ ಮಾಡುತ್ತಿರುವಾಗಲೆ ಇನ್ನೊಂದೆಡೆ ಜನತೆಯ ಪ್ರಜಪ್ರಭುತ್ವದ ಹಕ್ಕುಗಳನ್ನು ಧಮನಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ಭೂಮಿಯನ್ನು ಅಂಬಾನಿ, ಅದಾನಿ ಮುಂತಾದ ದೇಶಿಯ ಹಾಗೂ ವಿದೇಶಿ ಕಂಪನಿಗಳ ಬಕಾಸುರರ ಬಾಯಿಗೆ ಹಾಕುತ್ತಿದೆ. ಇದರಿಂದ ಇಡೀ ದೇಶದ ಸಮಸ್ತ ಕಾರ್ಮಿಕ ವರ್ಗವನ್ನು ಜೀತ ಪದ್ದತಿಯ ಕಾಲಕ್ಕೆ ನೂಕಲಾಗುತ್ತಿದೆ ಹಾಗೂ ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ದೂರಿದರು. ಸ್ವಾಮಿನಾಥನ್ ಶಿಫಾರಸಿನಂತೆ ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಶಾಸನ ಮಾಡಬೇಕು. ಎಲ್ಲಾ ರೈತರ ಕೃಷಿ ಕೂಲಿಕಾರರ ಮಹಿಳೆಯರ ಎಲ್ಲಾ ರೀತಿಯ ಸಾಲ ಮನ್ನಾ ಮಾಡಲು ಋಣಮುಕ್ತ ಕಾಯ್ದೆ ಜರಿಗೆ ಮತ್ತು ಶಾಸನಬದ್ಧ ಜೀವನಾವಶ್ಯಕ ಕನಿಷ್ಠ ಕೂಲಿಗೆ ಶಾಸನ ಮಾಡಬೇಕು ಹಾಗೂ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ರಾಜ್ಯ ರೈತ ಸಂಘ ಅಧ್ಯಕ್ಷ ಹೆಚ್.ಆರ್.ಬಸವರಾಜಪ, ಸಿಐಟಿಯು ಜಿಲ್ಲಾ ಸಂಚಾಲಕ ಎಂ.ನಾರಾಯಣ, ಬಿಸಿಯೂಟ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಹನುಮಮ್ಮ, ಡಿಎಸ್‌ಎಸ್ ಹಾಲೇಶಪ್ಪ, ಕರ್ನಾಟಕ ಜನ ಶಕ್ತಿ ರಾಜ್ಯ ಕಾರ್ಯದರ್ಶಿ ಕೆ.ಎಲ್.ಅಶೋಕ್, ಜಿಲ್ಲಾ ರೈತ ಸಂಘದ ಅಧ್ಯಕ್ಷ ರಾಘವೇಂದ್ರ, ರಾಜ್ಯ ರೈತ ಸಂಘದ ಮಹಿಳಾ ಸಂಚಾಲಕಿ ಭಾಗ್ಯ ರಾಘವೇಂದ್ರ, ಪ್ರಮುಖರಾದ ಶೇಷಪ್ಪ, ಚಂದ್ರಪ್ಪ , ಹರೀಶ್ ಇನ್ನಿತರರು ಇದ್ದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *