ಶಿವಮೊಗ್ಗ: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಳಗದ) ಶಿವಮೊಗ್ಗ ನಗರಾಧ್ಯಕ್ಷರಾಗಿ ಪಂಡಿತ್ ಕಿಶೋರ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲಾಧ್ಯಕ್ಷ ಕನ್ನಡ ಮುರುಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಹೆಗಡೆ ಸೇರಿದಂತೆ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರಿಗೆ ಪ್ರಮಾಣಪತ್ರ ನೀಡಿ ಸಂಘಟನೆಗೆ ಸೇರ್ಪಡೆ ಮಾಡಿಕೊಳ್ಳಲಾಯಿತು. ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಮುಖಂಡರು ಕರೆ ನೀಡಿದರು ಎಂದು ಸಂಘಟನೆಯ ಎಸ್. ಪವನ್ ತಿಳಿಸಿದ್ದಾರೆ.


