ಶಿವಮೊಗ್ಗ :- ಮಾ. 18ರ ನಾಳೆಯಿಂದ ಏ. 4ರವರೆಗೆ ಜಿಲ್ಲೆಯ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ನಡೆಯುತ್ತದೆ.
ಭದ್ರಾವತಿ 15, ಹೊಸನಗರ 7, ಸಾಗರ 9, ಶಿಕಾರಿಪುರ 11, ಶಿವಮೊಗ್ಗ 20, ಸೊರಬ 10 ಮತ್ತು ತೀರ್ಥಹಳ್ಳಿ 7 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿ ಗಳಿಗೆ ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಮಾಡಬೇಕು. ಹಾಗೂ ಒತ್ತಡ ರಹಿತ ವಾತಾವರಣವನ್ನು ನಿರ್ಮಿಸಬೇಕು. ಎಲ್ಲಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ವೆಬ್ ಕಾಸ್ಟಿಂಗ್ ಪ್ರಕ್ರಿಯೆ ಸಮರ್ಪಕವಾಗಿ ನಡೆಯಲು ಪೂರ್ವಭಾವಿ ಯಾಗಿ ಡ್ರೈರನ್ ನಡೆಸಲಾಗಿದ್ದು, ಮತ್ತೊಮ್ಮೆ ಇಂಟರ್‌ನೆಟ್ ವ್ಯವಸ್ಥೆ, ಯುಪಿಎಸ್ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದ್ದಾರೆ

31 ಮಾರ್ಗ ರಚಿಸಲಾಗಿದ್ದು, ಈ ಮಾರ್ಗಗಳಿಗೆ ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. 79 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳು ಸುಸೂತ್ರವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂನವರು ಒದಗಿಸುವಂತೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಅಗತ್ಯವಾದ ಪೊಲೀಸ್ ಬಂದೋಬಸ್ತ್‌ಗೆ ಮನವಿ ಮಾಡಲಾಗಿದ್ದು, ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾe ಜಾರಿಗೊಳಿಸಿ, ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ ಸೈಬರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸದಂತೆ ಆದೇಶಿಸಲಾಗಿದೆ.
ವಿದ್ಯಾರ್ಥಿಗಳು ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಗಳಿಗೆ ತರುವಂತಿಲ್ಲ. ಈ ಬಗ್ಗೆ ಸೂಕ್ತವಾಗಿ ಪರಿಶೀಲನೆ ನಡೆಸಲಾಗುವುದು ಎಂದ ಅವರು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಪರೀಕ್ಷೆಗಳು ನಡೆಯು ವಂತೆ ಎಲ್ಲ ಅಧಿಕಾರಿಗಳು ನೋಡಿಕೊಳ್ಳ ಬೇಕೆಂದು ಸೂಚನೆ ನೀಡಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಿದ್ದು, ಡ್ರೈರನ್ ನಡೆಸಿ ಖಾತ್ರಿಪಡಿಸಿಕೊಂಡು, ಯುಪಿಎಸ್, ಇಂಟರ್‌ನೆಟ್ ಇತರೆ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಿಂದ ದೂರ ಇರುವ ವಿದ್ಯಾರ್ಥಿಗಳಿಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ. ತಾಲ್ಲೂಕು ಮಟ್ಟದಿಂದ ಹಿಡಿದು ಎಲ್ಲ ಪರೀಕ್ಷಾ ನಿಯೋಜಿತ ಅಧಿಕಾರಿಗಳು ನಿಗದಿತ ಅವಧಿಯೊಳಗೆ ಹಾಜರಿದ್ದು, ಪರೀಕ್ಷೆ ಶಾಂತಿಯುತ ವಾಗಿ ಮತ್ತು ಪಾರದರ್ಶಕವಾಗಿ ನಡೆಯು ವಂತೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.


