ಶಿವಮೊಗ್ಗ :- ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ವರಮಹಾಲ್ಷ್ಮೀ ಹಬ್ಬವನ್ನು ಶುಕ್ರವಾರ ಶಿವಮೊಗ್ಗ ಸೇರಿದಂತೆ ಜಿಲ್ಲೆಯಾದ್ಯಂತ ಮಹಿಳೆಯರು ಸಂಭ್ರಮ, ಸಡಗರದಿಂದ ಆಚರಿಸಿದರು. ಹೆಣ್ಣುಮಕ್ಕಳು ತಮ್ಮ ಮನೆಯಲ್ಲಿ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು. ಹೆಂಗಳೆಯರು, ಮಕ್ಕಳು ಮುಂಜನೆಯೇ ಎದ್ದು ಮನೆಯ ಮುಂದೆ ರಂಗೋಲಿ ಹಾಕಿ, ತಳಿರು ತೋರಣ ಕಟ್ಟಿ, ಲಕ್ಷ್ಮೀದೇವಿಯ ಸ್ತ್ರೋತ್ರ, ವ್ರತ ಆಚರಣೆ ಮಾಡಿದರು. ಸಂಪತ್ತಿನ ಅಧಿದೇವತೆ ಲಕ್ಷ್ಮೀಯನ್ನು ಓಲೈಸುವ ಹಬ್ಬ ಎಂದೆ ಪ್ರಸಿದ್ಧಿ ಪಡೆದಿದ್ದು ಎಲ್ಲೆಡೆ ವರಮಹಾಲಕ್ಷ್ಮಿಯ ಹಬ್ಬದ ಸಡಗರ ಕಂಡುಬಂದಿತು.
ವರಮಹಾಲಕ್ಷ್ಮ್ಮೀ ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕೈಂಕಾರ್ಯ ನಡೆದವು. ಬೆಳಿಗ್ಗೆಯಿಂದಲೇ ಭಕ್ತರು ದೇವಸ್ಥಾನಕ್ಕೆ ತೆಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಹಬ್ಬದ ಹಿನ್ನೆಲೆಯಲ್ಲಿ ನಗರದ ವಿವಿಧ ದೇವಿ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ಬೆಳಿಗ್ಗೆಯಿಂದಲೇ ಭಕ್ತರು ಸರತಿಯಲ್ಲಿ ನಿಂತು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಖರೀದಿ ಭರಾಟೆ : ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಗಳು ಜನರಿಂದ ತುಂಬಿಕೊಂಡಿದ್ದವು. ಹಬ್ಬದ ವಸ್ತುಗಳ ಖರೀದಿ ಭರಾಟೆಯೂ ಜೋರಾಗಿತ್ತು. ಹಬ್ಬಕ್ಕೆ ಬೇಕಾದ ಹೂವು-ಹಣ್ಣುಗಳನ್ನು ಜನರು ಖರೀದಿಸುತ್ತಿದ್ದರು. ಜನರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿತು. ಹೂವು, ಹಣ್ಣುಗಳ ಬೆಲೆಯಲ್ಲಿ ಏರಿಕೆಯಾಗಿತ್ತು. ಹೀಗಿದ್ದರೂ ಕೂಡ ಜನರು ಹಬ್ಬಕ್ಕೆ ಬೇಕಾದ ಹೂ, ಹಣ್ಣು, ಖರೀದಿಸುವಲ್ಲಿ ಜನರು ಮಗ್ನರಾಗಿದ್ದು ಕಂಡು ಬಂತು. ನಗರದ ಗಾಂಧಿ ಬಜರ್, ನೆಹರು ರಸ್ತೆ, ಗೋಪಿ ವೃತ್ತ, ಲಕ್ಷ್ಮ್ಮೀ ಚಿತ್ರಮಂದಿರ ವೃತ್ತ, ಪೊಲೀಸ್ ಚೌಕಿ ಸೇರಿದಂತೆ ಎಲ್ಲೆಡೆ ವ್ಯಾಪಾರ ವಹಿವಾಟು ಜೋರಾಗಿ ನಡೆಯಿತು. ಹಬ್ಬಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಕೊಂಡುಕೊಳ್ಳುತ್ತಿದ್ದ ದೃಶ್ಯ ಕಂಡು ಬಂದಿತು.

