<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಸಚಿವ ಮಧುಬಂಗಾರಪ್ಪರಿಗೆ ಶಿಕ್ಷಕ ರಕ್ತದಲ್ಲಿ ಪತ್ರ ಬರೆದದ್ದೇಕೆ..?

Banner Ad
ಸಚಿವ ಮಧುಬಂಗಾರಪ್ಪರಿಗೆ ಶಿಕ್ಷಕ ರಕ್ತದಲ್ಲಿ ಪತ್ರ ಬರೆದದ್ದೇಕೆ..?

ಶಶಿ ಮಾರಿ ಪುರ :- 1995ರ ನಂತರದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಶಿಕಾರಿಪುರದ ಶಿಕ್ಷಕರೊಬ್ಬರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಶಿಕ್ಷಕ ಪ್ರಶಾಂತ್ ಸಿರೇಂಜ್ ಮೂಲಕ ತಮ್ಮ ರಕ್ತವನ್ನು ತೆಗೆದುಕೊಂಡು ಪತ್ರ ಬರೆದಿದ್ದಾರೆ. ಕನ್ನಡ ಶಾಲೆಗಳಿಗೆ ಅನುದಾನ ನೀಡುವಂತೆ ಶಿಕ್ಷಣ ಇಲಾಖೆ ಮತ್ತು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಅನುದಾನ ಕಲ್ಪಿಸುವ ಭರವಸೆ ಉಳಿಸಿಕೊಳ್ಳಲಿಲ್ಲ…

1995ರ ನಂತರ ಆರಂಭವಾಗಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ರಾಜ್ಯ ಸರ್ಕಾರ ಅನುದಾನ ನಿಲ್ಲಿಸಿದೆ. ಈ ಕುರಿತು ಕನ್ನಡ ಮಾದ್ಯಮ ಶಾಲೆಗಳ ಶಿಕ್ಷಕರು ಬೆಂಗಳೂರಿನಲ್ಲಿ ಹಲವು ಬಾರಿ ಪ್ರತಿಭಟನೆ ನಡೆಸಲಾಗಿದೆ. ಆ ಸಂದರ್ಭ ಕನ್ನಡ ಶಾಲೆಗಳಿಗೆ ಅನುದಾನ ಕಲ್ಪಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಇದುವರೆಗೆ ಕ್ರಮ ಕೈಗೊಂಡಿಲ್ಲ ಎಂದು ಶಿಕ್ಷಕರು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ಶಿಕ್ಷಕರಿಂದ ನೆತ್ತರ ಪತ್ರ ಮೊದಲು ತಾನು ಸ್ವತಃ ತನ್ನ ರಕ್ತದಿಂದ ಪತ್ರ ಬರೆಯುತ್ತಿರುವುದಾಗಿ ತಿಳಿಸಿರುವ ಶಿಕ್ಷಕ ಪ್ರಶಾಂತ್, ಬೇಡಿಕೆ ಈಡೇರದಿದ್ದರೆ ನವೆಂಬರ್ 1 ರಂದು ಕನ್ನಡ ಶಾಲೆಗಳ ಉಳಿದ ಶಿಕ್ಷಕರು ಸಹ ತಮ್ಮ ರಕ್ತದಿಂದಲೇ ಪತ್ರ ಬರೆಯಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *