<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಗಣೇಶ ಹಬ್ಬದ ಮೆರವಣೆಗೆ ವೇಳೆ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಬೈಕ್ ರ‍್ಯಾಲಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Banner Ad
ಗಣೇಶ ಹಬ್ಬದ ಮೆರವಣೆಗೆ ವೇಳೆ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಬೈಕ್ ರ‍್ಯಾಲಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗ :- ಜಿಲ್ಲೆಯಲ್ಲಿ ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಸೆ. 14 ರಿಂದ ಅ. 13 ರವರೆಗೆ 30 ದಿನಗಳ ಕಾಲ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದುಗಳನ್ನು ಸಿಡಿಸುವುದನ್ನು ಮತ್ತು ಬೈಕ್ ರ‍್ಯಾಲಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಆದೇಶ ಹೊರಡಿಸಿದ್ದಾರೆ.

ಸೆ. 14ರಂದು ಜಿಲ್ಲಾದ್ಯಂತ ಗಣೇಶ ಹಬ್ಬ ನಡೆಯಲಿದ್ದು, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆಗಳಿರುತ್ತವೆ.

ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರ ಶಿಫಾರಸಿನಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಕಲಂ 35, 36 ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲಾದ್ಯಂತ ಸೆ. 14 ರಿಂದ ಅ.13 ರವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *