ಶಿವಮೊಗ್ಗ :- ನಗರದ ಭೋವಿ ಭವನದಲ್ಲಿ ಜಿಲ್ಲಾ ಭೋವಿ (ವಡ್ಡರ) ವಿದ್ಯಾವರ್ಧಕ ಸಂಘದಿಂದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸದಸ್ಯರಿಗೆ ಸದಸ್ಯತ್ವ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರು ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಶೈಕ್ಷಣಿಕ ಸಾಧನೆಗೆ ಶುಭ ಹಾರೈಸಿದರು. ಶ್ರೀ ಸಿದ್ದರಾಮೇಶ್ವರ ಸ್ವಾಮಿಗಳು ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಗೌರವಿಸುವುದರ ಜೊತೆಗೆ, ಸಮುದಾಯದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನೂತನ ಸದಸ್ಯರಿಗೆ ಸದಸ್ಯತ್ವ ಕಾರ್ಡ್‌ಗಳನ್ನು ವಿತರಿಸಲಾಯಿತು.


