ಶಿವಮೊಗ್ಗ :- ಸೋಗಾನೆ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಜಮೀನು ಕಳೆದುಕೊಂಡಿರುವ ರೈತರು ಹಾಗೂ ಜಮೀನು ಮಾಲೀಕರಿಗೆ ಸೂಕ್ತ ಪರಿಹಾರ ಒದಗಿಸುವ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಮಹತ್ವದ ಸಭೆ ನಡೆಯಿತು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಸೋಗಾನೆ ಏರ್‌ಪೋರ್ಟ್‌ಗಾಗಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಜಮೀನು ಕಳೆದುಕೊಂಡಿರುವ ಕುಟುಂಬಗಳ ಸಮಸ್ಯೆಗಳು ಹಾಗೂ ಅವರಿಗೆ ಪರಿಹಾರ ನೀಡುವ ವಿಚಾರದ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸುದೀರ್ಘ ವಾಗಿ ಚರ್ಚಿಸಲಾಯಿತು.ಜಮೀನು ಕಳೆದುಕೊಂಡಿರುವ ರೈತರು ಹಾಗೂ ಭೂಮಾಲೀಕರಿಗೆ ಸರ್ಕಾರದ ನಿಯಮಾನುಸಾರ ದೊರೆಯಬೇಕಾದ ಪರಿಹಾರವನ್ನು ವಿಳಂಬವಿಲ್ಲದೆ ಒದಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಾಸಕರಾದ ಶಾರದಾ ಪೂರ್‍ಯಾ ನಾಯ್ಕ ಅವರು ಅಧಿಕಾರಿಗಳ ಗಮನ ಸೆಳೆದರು.
ಭೂ ಸ್ವಾಧೀನಕ್ಕೆ ಸಂಬಂಧಿಸಿದ ದಾಖಲೆಗಳು, ಪರಿಹಾರ ಮೊತ್ತದ ನಿರ್ಧಾರ, ಬಾಕಿ ಇರುವ ಪ್ರಕರಣಗಳು ಹಾಗೂ ಫಲಾನುಭವಿಗಳಿಗೆ ಪರಿಹಾರ ತಲುಪಿಸುವ ಪ್ರಕ್ರಿಯೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳ ಲಾಯಿತು. ವಿಮಾನ ನಿಲ್ದಾಣದಂತಹ ಅಭಿವೃದ್ಧಿ ಯೋಜನೆಗಳು ಜಿಲ್ಲೆಯ ಪ್ರಗತಿಗೆ ಅಗತ್ಯವಾಗಿದ್ದರೂ, ಅಭಿವೃದ್ಧಿ ಗಾಗಿ ತಮ್ಮ ಜಮೀನು ಕಳೆದುಕೊಂಡಿ ರುವ ರೈತರು ಹಾಗೂ ಕುಟುಂಬಗಳ ಹಿತಾಸಕ್ತಿಯನ್ನೂ ಸರ್ಕಾರ ಕಾಪಾಡ ಬೇಕು. ಅವರಿಗೆ ನ್ಯಾಯಸಮ್ಮತ ಹಾಗೂ ನಿಯಮಾನುಸಾರ ಪರಿಹಾರ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಶಾಸಕರು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಪರಿಹಾರ ಪಡೆಯಲು ಬಾಕಿ ಇರುವ ಪ್ರಕರಣಗಳನ್ನು ಪರಿಶೀಲಿಸಿ, ಅರ್ಹ ಫಲಾನುಭವಿಗಳಿಗೆ ಸೂಕ್ತ ಪರಿಹಾರ ದೊರೆಯುವಂತೆ ಸಂಬಂಧಿಸಿದ ಇಲಾಖೆಗಳ ನಡುವೆ ಸಮನ್ವಯ ಸಾಧಿಸುವ ಅಗತ್ಯದ ಬಗ್ಗೆಯೂ ಚರ್ಚಿಸ ಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಕಟ್ಟಿ, ತಹಶೀಲ್ದಾರ್ ರಾಜೀವ್ ಹಾಗೂ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


