<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಶಿವಮೊಗ್ಗದಲ್ಲಿ ಅಕ್ಟೋಬರ್ 8ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

Banner Ad
ಶಿವಮೊಗ್ಗದಲ್ಲಿ ಅಕ್ಟೋಬರ್ 8ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

ಶಿವಮೊಗ್ಗ :- ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 08 ರಂದು ಬೆಳಿಗ್ಗೆ 10 ಗಂಟೆಗೆ “ನೇರ ಸಂದರ್ಶನ’ವನ್ನು ಆಯೋಜಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ ಇಟಾಚಿ ಕ್ಯಾಶ್ ಮ್ಯಾನೇಜ್‌ಮೆಂಟ್ ಸರ್ವಿಸ್ ಪ್ರೈ.ಲಿ., ಖಾಸಗಿ ಕಂಪನಿ ಭಾಗವಹಿಸಲಿದ್ದು, ಉದ್ಯೋಗ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.

ಅ. 8ರ ಬೆಳಿಗ್ಗೆ 10ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದ್ದು ಎಸ್ ಎಸ್ ಎಲ್ ಸಿ, ಪಿಯುಸಿ, ಮತ್ತು ಯಾವುದೇ ಪದವಿ ಪಡೆದಿರುವ 18 ರಿಂದ 35 ವರ್ಷ ಒಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಥವಾ ದೂ. 9380663606/9108235132ರಲ್ಲಿ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

—

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *