ಶಿವಮೊಗ್ಗ :- ಎಸ್ಐಆರ್ ನಲ್ಲಿ ನಡೆದಿರುವ ಅಕ್ರಮ ಮತ್ತು ಮತಗಳತನವನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣನವರಿಗೆ ಕಪ್ಪು ಬಾವುಟ ತೋರಿಸುವ ಮೂಲಕ ಪ್ರತಿಭಟಿಸಲಾಯಿತು.
ಜೊತೆಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜನೇಶ್ ಕುಮಾರ್ ಅವರನ್ನು ವಜಗೊಳಿಸುವಂತೆ ಈ ಸಂದರ್ಭದಲ್ಲಿ ಕಾರ್ಯಕರ್ತರು ಆಗ್ರಹಿಸಿದರು.

ಇಂದು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರ ಉದ್ಘಾಟನೆಗೆ ಕಾರಿನಲ್ಲಿ ಬರುವ ಸಮಯದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಯ ಮಧ್ಯದಲ್ಲಿಯೇ ಏಕಾ ಏಕಿ ಮುತ್ತಿಗೆ ಹಾಕಿದರು. ಇವರನ್ನು ಚದುರಿಸಲು ಟ್ರಾಫಿಕ್ ಪೊಲೀಸರು ಹರಸಾಹಸ ಮಾಡಬೇಕಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ ಶಿವಮೊಗ್ಗ ನಗರ ಅಧ್ಯಕ್ಷ ಚರಣ್ ಶೆಟ್ಟಿ ಉತ್ತರ ಬ್ಲಾಕ್ ಅಧ್ಯಕ್ಷ ಗಿರೀಶ್ ದಕ್ಷಿಣ ಬ್ಲಾಕ್ ಅಧ್ಯಕ್ಷ ಮೊಹಮದ್ ಸಕ್ಲೇನ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವರಾಜ್ ಮಲವಗೊಪ್ಪ ಆಕಾಶ್ ಬಾಲಾಜಿ ಶೆಟ್ಟಿ ನಿಖಿಲ್ ವಿಷ್ಣುಕುಮಾರ್ ಅನಂತ ಮಹಮ್ಮದ್ ತೌಸೀಫ್, ಲಿಂಗರಾಜು ಬೊಮ್ಮಕಟ್ಟೆ,


