<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ರೈತರಿಗೆ ಕನಿಷ್ಠ ಪ್ರತಿ ಹೆಕ್ಟೇರ್ ಗೆ 25 ಸಾವಿರ ಬರ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ : ನಿಖಿಲ್ ಕುಮಾರಸ್ವಮಿ

Banner Ad
ರೈತರಿಗೆ ಕನಿಷ್ಠ ಪ್ರತಿ ಹೆಕ್ಟೇರ್ ಗೆ 25 ಸಾವಿರ ಬರ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ : ನಿಖಿಲ್ ಕುಮಾರಸ್ವಮಿ

ಶಿವಮೊಗ್ಗ :- ರಾಜ್ಯದಲ್ಲಿ ಬರದಿಂದ ರೈತರು ಕಂಗಾಲಾಗಿ ಬೆಳೆ ಕೈಕೊಟ್ಟು, ಕೃಷಿ ವೆಚ್ಚ ಭರಿಸಲಾಗದೆ ಅನ್ನದಾತ ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಸಂದರ್ಭದಲ್ಲಿ ರೈತರ ಬೆನ್ನಿಗೆ ನಿಲ್ಲಬೇಕಾದ ರಾಜ್ಯ ಸರ್ಕಾರ ಪರಿಹಾರ ನೀಡುವಲ್ಲೇ ವಿಳಂಬ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ತಾಲ್ಲೂಕಿನ ತ್ಯಾಜವಳ್ಳಿ ಗ್ರಾಮದಲ್ಲಿ ರೈತ ಸ್ವಾಭಿಮಾನ ಯಾತ್ರೆಯ ಅಂಗವಾಗಿ ಮಾತನಾಡಿದ ಅವರು, “ರಾಜ್ಯ ಸರ್ಕಾರ ಕೇವಲ 220 ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿ ಕೈತೊಳೆದುಕೊಂಡಿದೆ. ವಾಸ್ತವದಲ್ಲಿ ಇಡೀ ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ಕಂಗಾಲಾಗಿದ್ದಾರೆ. ತಕ್ಷಣವೇ ಇಡೀ ರಾಜ್ಯವನ್ನು, ಅದರಲ್ಲೂ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು. ರೈತರಿಗೆ ಕನಿಷ್ಠ ಪ್ರತಿ ಹೆಕ್ಟೇರ್ ಗೆ 25 ಸಾವಿರ ಬರ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ನಿರ್ಲಕ್ಷಿಸಿದರೆ ರಾಜ್ಯದ ರೈತರೆಲ್ಲರೂ ಸೇರಿ ವಿಧಾನಸೌಧದ ಮುಂದೆ ಬೃಹತ್ ಹಾಗೂ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್, ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಇನ್ನಿತರರಿದ್ದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *