ಶಿವಮೊಗ್ಗ :- ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ ಯು)ದ ಪ್ರಾಧ್ಯಾಪಕನೋರ್ವನ ಲೈಂಗಿಕ ಕಿರುಕುಳವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಇಂದು ನಗರದ ಶೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿ ಬಳಿಕ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೋಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಘಟನೆ ನಡೆಯಿತು.
ಜೆಎನ್‌ಯು ಪ್ರಾಧ್ಯಾಪಕ ಮಣಿಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಡಾ.ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಎಂಬುವವರು ಅಲ್ಲಿನ 11 ವಿದ್ಯಾರ್ಥಿನಿಯರ ಮೇಲೆ ನೆಡೆಸಿದ ಲೈಂಗಿಕ ಕಿರುಕುಳವನ್ನು ಶಿವಮೊಗ್ಗ ಜಿಲ್ಲಾ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ. ಕಾನೂನು ಮತ್ತು ವಿವಿ ನಿಯಮಗಳ ಪ್ರಕಾರ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದ್ದು ಸಂಬಂಧಪಟ್ಟ ಪ್ರಾಧ್ಯಾಪಕರ ವಿರುದ್ಧ ಇರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಧುರಾ ಶಿವಾನಂದ್, ನಗರ ಮೋರ್ಚಾ ಅಧ್ಯಕ್ಷೆ ರಶ್ಮಿ ಶ್ರೀನಿವಾಸ್, ಕಾರ್ಯದರ್ಶಿ ಸುರೇಖಾ ಮುರಳೀಧರ, ಮಂಗಳಾ ನಾಗೇಂದ್ರ, ಶಾಂತಾ ಸುರೇಂದ್ರ, ಗೀತಾ ರವೀಂದ್ರ, ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ನಗರಾಧ್ಯಕ್ಷ ಮೋಹನ ರೆಡ್ಡಿ, ಪ್ರಮುಖರಾದ ಹರಿಕೃಷ್ಣ, ಸಿ.ಎಚ್.ಮಾಲತೇಶ್, ದೀನದಯಾಳ್, ಪ್ರಭಾಕರ್ ಮೊದಲಾದವರಿದ್ದರು.


