<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಜೆ.ಎನ್.ಎನ್.ಸಿ.ಇ ನಲ್ಲಿ ರಾಷ್ಟ್ರ ಮಟ್ಟದ ‘ಮಂಥನ -2026’ ಹ್ಯಾಕಥಾನ್

Banner Ad
ಜೆ.ಎನ್.ಎನ್.ಸಿ.ಇ ನಲ್ಲಿ ರಾಷ್ಟ್ರ ಮಟ್ಟದ ‘ಮಂಥನ -2026’ ಹ್ಯಾಕಥಾನ್

ಶಿವಮೊಗ್ಗ :  ನಗರದ ಪ್ರತಿಷ್ಠಿತ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ (ಡೇಟಾ ಸೈನ್ಸ್) ವಿಭಾಗದ ವತಿಯಿಂದ ಅ. 29 ಮತ್ತು 30 ರಂದು ಎರಡು ದಿನಗಳ ರಾಷ್ಟ್ರಮಟ್ಟದ ಹ್ಯಾಕಥಾನ್ ಆಯೋಜಿಸಲಾಗಿದೆ.

ಅ. 29ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಸಿಎಸ್‌ಇ ಸಭಾಂಗಣದಲ್ಲಿ ನಡೆಯುವ ಹ್ಯಾಕಥಾನ್‌ ಉದ್ಘಾಟನಾ ಸಮಾರಂಭದಲ್ಲಿ, ಪರ್ಫೆಕ್ಟ್ ಅಲಾಯ್ ಕಾಂಪೊನೆಂಟ್ಸ್ ಪ್ರೈವೇಟ್ ಲಿಮಿಟೆಡ್‌ನ ಮಾರುಕಟ್ಟೆ ನಿರ್ದೇಶಕ ವಿ.ಕೆ. ದಿವೇಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಪ್ರಾಂಶು ಪಾಲರಾದ ಡಾ. ವೈ. ವಿಜಯಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ (ಡೇಟಾ ಸೈನ್ಸ್) ವಿಭಾಗದ ಮುಖ್ಯಸ್ಥರಾದ ಡಾ. ಮಂಜುಳಾ ಜಿ. ಆರ್, ಸಂಯೋಜಕರಾದ ಡಾ. ಸುಶ್ಮಾ ಆರ್. ಬಿ. ಮತ್ತು ಡಾ. ನಮಿತಾ ಎಂ. ವಿ ಉಪಸ್ಥಿತರಿರಲಿದ್ದಾರೆ.
ಅ. 30ರಂದು ಮಧ್ಯಾಹ್ನ 2.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ, ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ. ನಾರಾಯಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ವಿಭಾಗದ ಮುಖ್ಯಸ್ಥೆ ಡಾ. ಮಂಜುಳಾ ಜಿ. ಆರ್. ಉಪಸ್ಥಿತರಿರಲಿದ್ದಾರೆ.
ಡೇಟಾ ಸೈನ್ಸ್ ತಂತ್ರಗಳನ್ನು ಬಳಸಿಕೊಂಡು ನೈಜ ಜಗತ್ತಿನ ಸಮಸ್ಯೆಗಳ ಸ್ವರೂಪವನ್ನು ಅರಿತು, ಪ್ರಾಯೋಗಿಕ ಹಾಗೂ ಪರಿಣಾಮಕಾರಿ ಪರಿಹಾರಗಳನ್ನು ರೂಪಿಸಲು ವಿದ್ಯಾರ್ಥಿಗಳು ಪ್ರಯತ್ನಿಸಲಿದ್ದಾರೆ. ಶೈಕ್ಷಣಿಕ ಕಲಿಕೆ ಮತ್ತು ಪ್ರಾಯೋಗಿಕ ಅನುಭವದ ನಡುವಿನ ಅಂತರವನ್ನು ಕಡಿಮೆ ಮಾಡಿ, ಭವಿಷ್ಯದ ತಂತ್ರಜ್ಞಾನ ಕ್ಷೇತ್ರಕ್ಕೆ ಅಗತ್ಯವಾದ ಕೌಶಲ ಮತ್ತು ಸೃಜನ ಶೀಲತೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶವನ್ನು ಈ ಹ್ಯಾಕಥಾನ್ ಹೊಂದಿದೆ.
Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *