<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಕಲಾ ಪ್ರತಿಭೋತ್ಸವಕ್ಕೆ ಆಹ್ವಾನ : ಏನೆಲ್ಲ ಕಲಾ ಪ್ರಕಾರಗಳಲ್ಲಿ ಸ್ಪರ್ಧೆ ನಡೆಯಲಿದೆ ?

Banner Ad
ಕಲಾ ಪ್ರತಿಭೋತ್ಸವಕ್ಕೆ ಆಹ್ವಾನ : ಏನೆಲ್ಲ ಕಲಾ ಪ್ರಕಾರಗಳಲ್ಲಿ ಸ್ಪರ್ಧೆ ನಡೆಯಲಿದೆ ?

ಶಿವಮೊಗ್ಗ :- ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2026-27ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕಲಾಪ್ರತಿಭೋತ್ಸವ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದ್ದು, ಅರ್ಹ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಾಲಪ್ರತಿಭೆಗಳಿಗೆ 8 ರಿಂದ 13 ವರ್ಷ, ಕಿಶೋರ ಪ್ರತಿಭೆಗಳಿಗೆ 14 ರಿಂದ 18 ವರ್ಷ ಹಾಗೂ ಯುವ ಪ್ರತಿಭೆಗಳಿಗೆ 19 ರಿಂದ 30 ವರ್ಷ ವಯೋಮಾನದ ಕಲಾವಿದರು ಅರ್ಜಿ ಸಲ್ಲಿಸಬಹುದು.

ಭರತನಾಟ್ಯ, ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಚಿತ್ರಕಲೆ, ಜಾನಪದ ಗೀತೆ, ಹಿಂದುಸ್ತಾನಿ ವಾದ್ಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ಆಶುಭಾಷಣ ಸೇರಿದಂತೆ ವಿವಿಧ ಕಲಾಪ್ರಕಾರಗಳಲ್ಲಿ ಸ್ಪರ್ಧೆ ನಡೆಯಲಿದೆ.

ಜಾನಪದ ನೃತ್ಯ ವಿಭಾಗದಲ್ಲಿ ಸಿದ್ಧಿ ಡಮಾಮಿ, ಡೊಳ್ಳು, ಗೋರವರ, ಗೊರವರ ಕುಣಿತ, ಕರಗ, ಸೋಮನಕುಣಿತ, ಪಟಕುಣಿತ, ಕಂಸಾಳೆ, ಪೂಜಾಕುಣಿತ, ಜಡೆ ಕೋಲಾಟ, ಲಂಬಾಣಿ, ಕರಡಿ ಮಜಲು ಹಾಗೂ ಕೋಡವ ನೃತ್ಯಗಳಿಗೂ ಅವಕಾಶವಿದೆ. ಜನಪದ ಗೀತೆಗಳ ಮುದ್ರಿತ ಹಾಡುಗಳ ನೃತ್ಯಗಳಿಗೆ ಅವಕಾಶವಿರುವುದಿಲ್ಲ.

ಅಕ್ಟೋಬರ್ 31ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್. ತಿಳಿಸಿದ್ದಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *