<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ರಾಜ್ಯ ಸರ್ಕಾರ ದಿವಾಳಿ : ಛಲವಾದಿ ನಾರಾಯಣಸ್ವಾಮಿ ಆತಂಕ

Banner Ad
ರಾಜ್ಯ ಸರ್ಕಾರ ದಿವಾಳಿ : ಛಲವಾದಿ ನಾರಾಯಣಸ್ವಾಮಿ ಆತಂಕ

ಶಿವಮೊಗ್ಗ :- ರಾಜ್ಯದ ಕಾಂಗ್ರೆಸ್ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ಹಾನಿಗೆ ಪರಿಹಾರ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲೂ ಸರ್ಕಾರದಲ್ಲಿ ಹಣವಿಲ್ಲದ ಪರಿಸ್ಥಿತಿ ನಿರ್ಮಾಣ ವಾಗಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇಂದು ಸುದ್ದಿಗೋಷ್ಟಿಯಲ್ಲಿ ಟೀಕಿಸಿದರು.

ರಾಜ್ಯದಲ್ಲಿ ಶೇ ೮೨ರಷ್ಟು ಬೆಳೆ ನಾಶವಾಗಿದೆ ಎಂದು ಕಂದಾಯ ಸಚಿವರೇ ತಿಳಿಸಿದ್ದಾರೆ. ಬೆಳೆ ನಷ್ಟ ಅನು ಭವಿಸಿರುವ ರೈತರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ (ಎಸ್‌ಡಿಆರ್‌ಎಫ್) ಅಡಿ ಎಕರೆಗೆ ೨೫ ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸ ಲಾಗಿತ್ತು. ಆದರೆ, ಸರ್ಕಾರ ೨,೫೦೦ ಮಾತ್ರ ಘೋಷಿಸಿದ್ದು, ಆ ಹಣವೂ ರೈತರ ಖಾತೆಗೆ ಜಮೆಯಾಗಿಲ್ಲ ಎಂದು ಆರೋಪಿಸಿದರು. ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು. ಸರ್ಕಾರ ಆರ್ಥಿಕ ಸಂಕಷ್ಟದ ನೆಪದಲ್ಲಿ ಜನರ ಸಮಸ್ಯೆ ಗಳನ್ನು ನಿರ್ಲಕ್ಷಿಸಬಾರದು. ರೈತರಿಗೆ ತಕ್ಷಣ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ದಲಿತರಿಗೆ ನ್ಯಾಯ ಕೊಡಿಸುವಲ್ಲಿ ಸರ್ಕಾರ ಎಡವಿದೆ. ಇಲ್ಲಿ ದಲಿತರು, ಅಂಗವಿಕಲರು, ವೃದ್ಧರು ಹಾಗೂ ವಿಧವೆಯರಿಗೆ ನೀಡುವ ಪಿಂಚಣಿ ಮತ್ತು ಮಾಸಿಕ ನೆರವು ಕಳೆದ ಆರೇಳು ತಿಂಗಳಿಂದ ಸ್ಥಗಿತಗೊಂಡಿದೆ ಎಂದು ಆರೋಪಿಸಿದ ಅವರು, ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳಿಗೆ ಸಕಾಲದಲ್ಲಿ ಹಣ ಪಾವತಿಸುವಂತೆ ಒತ್ತಾಯಿಸಿದರು.

ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಕೆ. ಎನ್. ಜಗದೀಶ್, ಬಿಜೆಪಿ ಜಿಲ್ಲಾ ವಕ್ತಾರ ಎಸ್ .ಎಸ್. ಜ್ಯೋತಿ ಪ್ರಕಾಶ್ ಪ್ರಮುಖರಾದ ಹರಿಕೃಷ್ಣ, ಬಳ್ಳೇಕೆರೆ ಸಂತೋಷ್, ಮಾಲ ತೇಶ್, ರಾಮುಕೋಹಳ್ಳಿ, ಹರೀಶ್, ಸಿದ್ದ ಲಿಂಗಪ್ಪ, ಪೆರಿಮಾಳ್, ಲಿಂಗ ರಾಜ್, ಚಂದ್ರಶೇಖರ ಇದ್ದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *