<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ನ. 1ರಂದು ಶ್ರೀ ರಾಮಕೃಷ್ಣ ಪಿಯು ಕಾಲೇಜು ಲೋಕಾರ್ಪಣೆ : ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವಿವರಣೆ

Banner Ad
ನ. 1ರಂದು ಶ್ರೀ ರಾಮಕೃಷ್ಣ ಪಿಯು ಕಾಲೇಜು ಲೋಕಾರ್ಪಣೆ : ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವಿವರಣೆ

ಶಿವಮೊಗ್ಗ :- ಆಧ್ಯಾತ್ಮದೊಂದಿಗೆ ವೈಜ್ಞಾನಿಕ ಶಿಕ್ಷಣ ನೀಡುವ ಉದ್ದೇಶದಿಂದ ನಗರದ ಪುರದಾಳ್ ರಸ್ತೆಯ ಅನುಪಿನಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ರಾಮಕೃಷ್ಣ ಪಿಯು ಕಾಲೇಜು ನ. 4ರಂದು ಬೆಳಿಗ್ಗೆ 10.30 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವೆಂಕಟರಮಣ ಅವರು ಇಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಶ್ರೀ ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್ ಸಂಸ್ಥಾಪಕ ಡಿ.ಎಂ. ವೆಂಕಟರಮಣ ಅವರ ಕನಸಿನ ಯೋಜನೆಯಾಗಿ ಕಾಲೇಜು ಆರಂಭಿಸಲಾಗುತ್ತಿದೆ. ಸಂಸ್ಥೆಯು ಶಿವಮೊಗ್ಗ ಜಿಲ್ಲೆ ಹಾಗೂ ಶೃಂಗೇರಿಯಲ್ಲಿ ಎಂಟಕ್ಕೂ ಹೆಚ್ಚು ಶಾಲೆಗಳನ್ನು ನಡೆಸುತ್ತಿದ್ದು, ಗುರುಕುಲ ಮಾದರಿಯ ಶಿಕ್ಷಣ ನೀಡುತ್ತಿದೆ ಎಂದರು.

ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಪಿಸಿಎಂಬಿ ಮತ್ತು ಪಿಸಿಎಂಸಿಎಸ್ ಸಂಯೋಜನೆಗಳನ್ನು ಆರಂಭಿಸಲಾಗುತ್ತಿದೆ. ಪಿಯುಸಿ ಶಿಕ್ಷಣದ ಜತೆಗೆ ನೀಟ್ ಮತ್ತು ಜೆಇಇ ಪ್ರವೇಶ ಪರೀಕ್ಷೆಗಳಿಗೆ ಇಂಟಿಗ್ರೇಟೆಡ್ ತರಬೇತಿ ನೀಡಲಾಗುವುದು. ಇದಕ್ಕಾಗಿ ಪರಿಣಿತ ಉಪನ್ಯಾಸಕರನ್ನು ನೇಮಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಕ್ಯಾಂಪಸ್‌ನಲ್ಲಿಯೇ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಸತಿ ವ್ಯವಸ್ಥೆ, ಸಂಜೆ ಅಧ್ಯಯನಕ್ಕೆ ವಿಶೇಷ ಅವಧಿ ಹಾಗೂ ಹಿರಿಯ ಉಪನ್ಯಾಸಕರ ಮಾರ್ಗದರ್ಶನ ಇರಲಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಕಂಪ್ಯೂಟರ್ ಪ್ರಯೋಗಾಲಯಗಳ ಜತೆಗೆ ವಿಶಾಲ ತರಗತಿ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಹಾಗೂ ಕಲ್ಲುಗಂಗೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ವಿನಯಾನಂದ ಸರಸ್ವತಿ ಮಹಾರಾಜ್ ಅವರ ದಿವ್ಯಸಾನ್ನಿಧ್ಯದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಡಿ.ಆರ್. ನಾಗೇಶ್ ವಹಿಸಲಿದ್ದಾರೆ. ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವೆಂಕಟರಮಣ, ಟ್ರಸ್ಟ್ ಸದಸ್ಯ ಡಿ.ಎಂ. ದೇವರಾಜ್ ಸೇರಿದಂತೆ ಗಣ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಡಿ.ಆರ್. ನಾಗೇಶ್, ಶರತ್, ರಮೇಶ್, ಸಮೃದ್ಧ ಇದ್ದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *