ಶಿವಮೊಗ್ಗ :- ಬರ ಮತ್ತು ಪ್ರಾಕೃತಿಕ ವಿಕೋಪಗಳ ನಡುವೆ ಕೃಷಿಯನ್ನು ಲಾಭದಾಯಕವಾಗಿ ಮತ್ತು ಯಶಸ್ವಿಯಾಗಿ ಮುನ್ನಡೆಸುವುದು ಹಾಗೂ ರೈತರಿಗೆ ಆರ್ಥಿಕ ಪುನಶ್ಚೇತನ ಮತ್ತು ಯಂತ್ರೋಪಕರಣಗಳ ಬಳಕೆಯ ಬಗ್ಗೆ ಅರಿವು ಮೂಡಿಸು ವುದು ಕೃಷಿ ಮೇಳದ ಮುಖ್ಯ ಉದ್ದೇಶವಾಗಿದ್ದು, ರೈತರೆಲ್ಲ ಇದರ ಸದುಪಯೋಗ ಪಡೆಯಬೇಕೆಂದು ಕೃಷಿ ಸಚಿವರು ಹಾಗೂ ಕೆ.ಶಿ.ನಾ.ಕೃ.ತೋ.ವಿ.ವಿ ಸಹ ಕುಲಾಧಿಪತಿಗಳಾದ ಪಿ. ಎಂ. ನರೇಂದ್ರಸ್ವಾಮಿ ಕರೆ ನೀಡಿದರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಆಶ್ರಯದಲ್ಲಿ “ಬರ ನಿರ್ವಹಣೆಗಾಗಿ ನಾವೀನ್ಯತಾ ಕೃಷಿ” ಎಂಬ ಧೈಯವಾಕ್ಯ ದೊಂದಿಗೆ ನವುಲೆ ಕೃಷಿ ಕಾಲೇಜು ಆವರಣದಲ್ಲಿ ಅ.31 ರಿಂದ ನ.2 ರವರೆಗೆ ಆಯೋಜಿಸ ಲಾಗಿರುವ ‘ಕೃಷಿ ಮತ್ತು ತೋಟ ಗಾರಿಕೆ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಸರಿಯಾಗಿ ಬಳಸಿಕೊಂಡು ಬರವನ್ನು ಮೆಟ್ಟಿ ನಿಲ್ಲಬಹುದಾಗಿದ್ದು ರೈತರು ಮುಕ್ತವಾಗಿ ವಿಜ್ಞಾನಿಗಳ ಸಲಹೆ ಬಳಸಿಕೊಂಡು ಮುನ್ನಡೆಯಬೇಕೆಂದರು.
ರೈತ ಕುಲವನ್ನು, ರಾಜ್ಯವನ್ನು ಮತ್ತು ಆಹಾರೋತ್ಪಾದನಾ ನಿರ್ಣಯವನ್ನು ಗಮನದಲ್ಲಿಟ್ಟುಕೊಂಡು ಇಲಾಖೆಯ ಜವಾಬ್ದಾರಿಯನ್ನು ನಿರ್ವಹಿಸುವುದು ಇವತ್ತಿನ ಕೃಷಿ ಮೇಳದ ಸವಾಲಾಗಿದೆ.ರೈತರಿಗೆ ನೆರವಾಗಲು ಹಲವು ಕಾರ್ಯಕ್ರಮ ಗಳನ್ನು ರೂಪಿಸಲಾಗಿದ್ದು, ನವೆಂಬರ್ ತಿಂಗಳಲ್ಲಿ ‘ನೇಗಿಲ ಯೋಗಿ’ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯು ಬರದಿಂದ ಕಂಗೆಟ್ಟಿರುವ ರೈತರಿಗೆ ಆರ್ಥಿಕ ಪುನಶ್ಚೇತನ ಮತ್ತು ಯಂತ್ರೋಪಕರಣಗಳನ್ನು ಬಳಸುವ ಜವಾಬ್ದಾರಿಯನ್ನು ಅರಿವು ಮೂಡಿಸುತ್ತದೆ. ರಾಜ್ಯದಲ್ಲಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪ್ರಾಥಮಿಕವಾಗಿ ಪ್ರತಿ ರೈತನಿಗೆ ರೂ.2,500 ಗಳ ಆರಂಭಿಕ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಗಳು, ಹವಾಮಾನ ವೈಪರೀತ್ಯ ತಡೆಬಲ್ಲ ತಳಿಗಳ ಹೊಸ ಆವಿಷ್ಕಾರಗಳು ಹಾಗೂ ಸೂಕ್ಷ್ಮ ನೀರಾವರಿ ತಂತ್ರಜ್ಞಾನಗಳ ಬಗ್ಗೆ ಕೃಷಿ ಮೇಳದಲ್ಲಿ ಮಾಹಿತಿ ನೀಡಲಾಗುತ್ತದೆ ಎಂದರು.
ನೆಗಲು ಯೋಗ ಯೋಜನೆ: ನವೆಂಬರ್ ತಿಂಗಳಲ್ಲಿ ‘ನೇಗಲು ಯೋಗ’ ಯೋಜನೆ ಅನುಷ್ಠಾನಗೊಳ್ಳಲಿದ್ದು, ಇದರ ಮೂಲಕ ಬರದಿಂದ ಕಂಗೆಟ್ಟಿರುವ ರೈತರಿಗೆ ಆರ್ಥಿಕ ಪುನಶ್ಚೇತನ ಮತ್ತು ಯಂತ್ರೋಪಕರಣಗಳನ್ನು ಬಳಸುವ ಜವಾಬ್ದಾರಿಯನ್ನು ಅರಿವು ಮೂಡಿಸಲಾಗುತ್ತದೆ. ಆರಂಭಿಕ ಪರಿಹಾರ: ರಾಜ್ಯದಲ್ಲಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಕೇಂದ್ರದ ನಿಲುವಿನ ಜೊತೆಗೆ, ಪ್ರತಿಯೊಬ್ಬ ರೈತರಿಗೆ ಆರಂಭಿಕ ಪರಿಹಾರವಾಗಿ 2,500 ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಕೃಷಿ ಕ್ಷೇತ್ರದಲ್ಲಿ ಸೂಕ್ಷ್ಮ ನೀರಾವರಿ ತಂತ್ರಜ್ಞಾನ, ಸಮಗ್ರ ಕೃಷಿ ಪದ್ಧತಿ, ಡಿಜಿಟಲ್ ಕೃಷಿ ಮತ್ತು ಕೃತಕ ಬುದ್ಧಿಮತ್ತೆಯ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.
ರೈತರಿಗೆ ಕೃಷಿ ಸಂಬಂಧಿತ, ಸಕಾಲಿಕ ಹಾಗೂ ಸ್ಥಳ ನಿರ್ದಿಷ್ಟ ಸಲಹೆಗಳನ್ನು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರಾಯೋಗಿಕವಾಗಿ ಐದು ಜಿಲ್ಲೆಗಳಲ್ಲಿ ವಿಶೇಷ ಯೋಜನೆಯನ್ನು ಜಾರಿಗೆ ತಂದಿದೆ. ಮಂಡ್ಯ, ಬೆಳಗಾವಿ, ವಿಜಯಪುರ, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ರೈತರಿಗೆ ಬೆಳೆ ಉತ್ಪಾದನೆ ಮತ್ತು ತಂತ್ರಜ್ಞಾನದ ಕುರಿತು ಜಾಗೃತಿ ಮೂಡಿಸಲು ಹಾಗೂ ಸಂದೇಶಗಳನ್ನು ತಲುಪಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಸೆ. 10ರಂದು ಮಾನ್ಯ ಮುಖ್ಯಮಂತ್ರಿಗಳು ಈ ಯೋಜನೆಗೆ ಚಾಲನೆ ನೀಡಿದ್ದು, ದಿನಾಂಕ 17-10-2026 ರ ವೇಳೆಗೆ ಈಗಾಗಲೇ ಸುಮಾರು 27 ಲಕ್ಷದ 15 ಸಾವಿರ ಕೃಷಿ ಸಲಹಾ ಸಂದೇಶಗಳನ್ನು ರೈತರಿಗೆ ಯಶಸ್ವಿಯಾಗಿ ತಲುಪಿಸಲಾಗಿದೆ.
ಸಂಸದ ಬಿ.ವೈ. ರಾಘವೇಂದ್ರ ಬರ ನಿರ್ವಹಣೆ” ನೇಗಿಲ ಮಿಡಿತ ವಿಶೇಷ ಸಂಚಿಕೆ ಹಾಗೂ ರೈತರ ಯಶೋಗಾಥೆ ಬಿಡುಗಡೆ ಗೊಳಿಸಿ ಮಾತನಾಡಿದರು ಕುಲಪತಿಗಳು, ಕೆ.ಶಿ.ನಾ.ಕೃ.ತೋ. ವಿ.ವಿ., ಶಿವಮೊಗ್ಗ ಡಾ. ಎಂ. ವಿ. ಧನಂಜಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪದ್ಮಶ್ರೀ ಪುರಸ್ಕೃತ ಕೃಷಿಕರು, ಪದ್ಮಶ್ರೀ ಪುರಸ್ಕೃತ ಕೃಷಿಕರು, ಕಾಸರಗೋಡು, ಸತ್ಯನಾರಾಯಣ ಬೆಲೆಕೇರಿ, ಒಡಂಬಡಿಕೆಗಳ ಸಹಿ ಹಾಗೂ ಹಸ್ತಾಂತರ ಮತ್ತು ಕೃಷಿ ಉತ್ಪನ್ನ ಬಿಡುಗಡೆಗೊಳಿಸಿದ ಹಾಗೂ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ಮಾತನಾಡಿದರು. ಶಾಸಕ ಎಸ್ ಎನ್ ಚನ್ನಬಸಪ್ಪ, ಪರಿಶಿಷ್ಟ ಜಾತಿ, ವರ್ಗ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ, ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಚೇತನ್, ಕೆ. ,ಕೃಷಿಕ ಸಮಾಜದ ನಗರದ ಮಹಾದೇವಪ್ಪ, ಪ್ರಗತಿಪರ ರೈತರು ಮತ್ತು ವ್ಯವಸ್ಥಾಪನಾ ಮಂಡಳಿ ಸದಸ್ಯರು, ವಿವಿಧ ಕೃಷಿ ವಿ.ವಿ. ಕುಲಪತಿಗಳು, ವಿಸ್ತರಣಾ ನಿರ್ದೇಶಕ ಡಾ. ರಾಘವೇಂದ್ರ ಕೆ. ಮೇಸ್ತ ವಂದಿಸಿದರು.


