<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಶಿವಮೊಗ್ಗದಲ್ಲಿ 7ನೇ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನಕ್ಕೆ ಸಿದ್ದತೆ

Banner Ad
ಶಿವಮೊಗ್ಗದಲ್ಲಿ 7ನೇ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನಕ್ಕೆ ಸಿದ್ದತೆ

ಶಿವಮೊಗ್ಗ :- ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ, ಶಿವಮೊಗ್ಗ ಹಾಗೂ ನಗರದ ವಿವಿಧ ಸಂಘ ಸಂಸ್ಥೆಗಳು ಮತ್ತು ವಚನಾಭಿಮಾನಿಗಳ ಸಹಕಾರದೊಂದಿಗೆ ಶಿವಮೊಗ್ಗ ಜಿಲ್ಲಾ 7ನೇ ಶರಣ ಸಾಹಿತ್ಯ ಸಮ್ಮೇಳನವನ್ನು ಮಾ. 24 ಹಾಗೂ 25 ರಂದು ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡರು ತಿಳಿಸಿದರು.

ಇಂದು ಬಸವಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನ ಸವಾಲುಗಳು – ವಚನಗಳಲ್ಲಿ ಉತ್ತರ ’ ಎಂಬ ಚಿಂತನೆಯೊಂದಿಗೆ ನಡೆಯಲಿರುವ ಈ ಸಮ್ಮೇಳನಕ್ಕೆ ಶಿವಮೊಗ್ಗದ ಶ್ರೀ ಬೆಕ್ಕಿನಕಲ್ಮಠದ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರು ಸರ್ವಾಧ್ಯಕ್ಷರಾಗಿರಲಿದ್ದಾರೆ. ಸಮ್ಮೇಳನದ ಉದ್ಘಾಟನಾ ಸಮಾರಂಭವು ಮಾರ್ಚ್ 24ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿದೆ.

ಮಾ. 25ರ ಸಂಜೆ ೪ರಿಂದ 5.30 ರವರೆಗೆ ನಡೆಯಲಿರುವ ಈ ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯವನ್ನು ನಿಡಸೋಸಿಯ ಶ್ರೀ ಜಗದ್ಗುರು ದುರುದುಂಡೀಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಆನಂದಪುರದ ಶ್ರೀ ಮುರುಘಾಮಠ ಹಾಗೂ ಶಿವಮೊಗ್ಗದ ಶ್ರೀ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಸಮ್ಮೇಳನಾಧ್ಯಕ್ಷರಾಗಿ ಉಪಸ್ಥಿತರಿರುತ್ತಾರೆ. ಶಿವಮೊಗ್ಗ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್. ಎಸ್. ಮಹಾರುದ್ರಪ್ಪ ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರಿನ ಮಹಾರಾಣಿ ವಿಜನ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಎಂ. ಎಸ್. ಆಶಾದೇವಿ ಸಮಾರೋಪ ನುಡಿಗಳನ್ನು ಆಡಲಿದ್ದಾರೆ ಎಂದರು.

ಪತ್ರಿಕಾಗೊಷ್ಟಿಯಲ್ಲಿ ಹೆಚ್. ಎನ್. ಮಹಾರುದ್ರ ಜ್ಯೋತಿಪ್ರಕಾಶ್, ಬೆನಕಪ್ಪ, ಲವ ಕುಮಾರ್, ರುದ್ರೇಶ್, ರುದ್ರಮುನಿ ಸಜ್ಜನ್, ಆರ್.ಎಸ್.ಹಾಲಸ್ವಾಮಿ, ಗಾಯತ್ರಿ ಪಟೇಲ್, ಬಸವನಗೌಡ ಮಾಳಗಿ ಇತರರು ಇದ್ದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *