<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಸಿಎಂ ಎಲಿಕಾಫ್ಟರ್ ಕಳಿಸುವೆ ಎಂದಿದ್ಯಾಕೆ..?

Banner Ad
ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಸಿಎಂ ಎಲಿಕಾಫ್ಟರ್ ಕಳಿಸುವೆ ಎಂದಿದ್ಯಾಕೆ..?

ಸಾಗರ :- ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ವಿಧಾನಸಭೆಯ ಮಾಜಿ ಸ್ಪೀಕರ್ ಡಾ.ಕಾಗೋಡು ತಿಮ್ಮಪ್ಪ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಭಾಜನವಾದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇಂದು ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಮಧು ಬಂಗಾರಪ್ಪ ಅವರು ವಿಡಿಯೋ ಕರೆ ಮಾಡಿ, ಕಾಗೋಡು ತಿಮ್ಮಪ್ಪ ಅವರೊಂದಿಗೆ ಮಾತನಾಡಿಸಿದರು. ಮುಖ್ಯಮಂತ್ರಿ ಅವರಿಗೆ ಶುಭಾಶಯ ತಿಳಿಸಿ, ರಾಜಕೀಯ ಕ್ಷೇತ್ರದಲ್ಲಿ ನಿಮ್ಮ ಅವರ ಸೇವೆ ಅನುಕರಣೀಯವಾಗಿದೆ ಎಂದು ಸ್ಮರಿಸಿದರು.ಭಗವಂತ ನಿಮಗೆ ಉತ್ತಮ ಆರೋಗ್ಯ ನೀಡಲಿ.ನಿಮ್ಮ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ ಎಂದು ಹೇಳಿದರು.

ಸಿಎಂ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲೇ ಎಂದಿದ್ಯಾಕೆ..? :

ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಬೆಂಗಳೂರಿಗೆ ಆಗಮಿಸುವುದು ಕಷ್ಟವಾಗಬಹುದೆಂಬ ಹಿನ್ನೆಲೆಯಲ್ಲಿ, ಹೆಲಿಕಾಪ್ಟರ್ ವ್ಯವಸ್ಥೆ ಮಾಡಬೇಕೇ ಎಂದು ಮುಖ್ಯಮಂತ್ರಿ ವಿಚಾರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಗೋಡು ತಿಮ್ಮಪ್ಪ ಅವರು, ಬೇಡ, ನಾನು ಹೇಗೋ ಬರುವೆ ಎಂದು ತಮ್ಮ ಸರಳ ಸ್ವಭಾವವನ್ನು ಮತ್ತೊಮ್ಮೆ ಮೆರೆದರು.

ಕಾಗೋಡು ಅವರ ಮನೆಗೆ ತೆರಳಿ ಪ್ರಶಸ್ತಿ ಪ್ರದಾನ :

ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಬೆಂಗಳೂರಿಗೆ ಬಂದು ಪ್ರಶಸ್ತಿ ಸ್ವೀಕರಿಸಲು ಅವರಿಗೆ ತೊಂದರೆಯಾಗಬಹುದು.ಈ ಹಿನ್ನೆಲೆಯಲ್ಲಿ ಸರ್ಕಾರವೇ ಅವರ ಮನೆಗೆ ತೆರಳಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಈ ಸಂದರ್ಭದಲ್ಲಿ ಕಾಗೋಡು ತಿಮ್ಮಪ್ಪ ಅವರು ಸಚಿವ ಮಧು ಬಂಗಾರಪ್ಪ ಅವರ ಕೈಗೆ ಮುತ್ತಿಟ್ಟು ಪ್ರೀತಿಯಿಂದ ಮಾತನಾಡಿ, ಸಣ್ಣ ವಯಸ್ಸಿನಲ್ಲೇ ಸಚಿವರಾಗಿದ್ದೀರಿ. ಒಳ್ಳೆಯ ಕೆಲಸ ಮಾಡಿ, ರಾಜಕೀಯದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಿರಿ ಎಂದು ಹಾರೈಸಿದರು.ಹಿರಿಯ ನಾಯಕನ ಈ ಪ್ರೀತಿ ಮತ್ತು ಆಶೀರ್ವಾದದ ಕ್ಷಣ ಎಲ್ಲರ ಗಮನ ಸೆಳೆಯಿತು.

ಕಾಗೋಡು ತಿಮ್ಮಪ್ಪರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರು, ಶರಾವತಿ ಸಂತ್ರಸ್ತರಿಗೆ ಭೂಹಕ್ಕು ನೀಡು ಸಂಬಂಧ ಸಮಗ್ರವಾಗಿ ಪರಿಶೀಲನೆನಡೆಸಿಪ್ರಸ್ತಾವನೆ ಸಿದ್ಧಪಡಿಸಿದ್ದೇವೆ. ಸದ್ಯವೇ ಇದಕ್ಕೆ ಸಚಿವಸಂಪುಟದ ಒಪ್ಪಿಗೆ ಪಡೆದು, ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡುತ್ತೇವೆ. ಶೀಘ್ರದಲ್ಲೇ ಅವರಿಗೆಲ್ಲಾ ಹಕ್ಕು ಪತ್ರ ದೊರೆಯುವಂತೆ ಮಾಡಿ, ನಿಮ್ಮ ಬಹುದಿನಗಳ ಕನಸು ಈಡೇರುವಂತೆ ಮಾಡುತ್ತೇವೆ’ಎಂದು ತಿಳಿಸಿದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *