ಶಿವಮೊಗ್ಗ :- ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ಇಂದು ತಮ್ಮ ಶಾಸಕರ ಕಚೇರಿಯಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಯಡಿ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳು, ವೀಲ್‌ಚೇರ್‌ಗಳು ಹಾಗೂ ಶ್ರವಣದೋಷ ವುಳ್ಳವರಿಗೆ ಶ್ರವಣ ಸಾಧನಗಳನ್ನು ವಿತರಿಸಿದರು.

ವಿಕಲಚೇತನರು ಸ್ವಾವಲಂಬಿ ಜೀವನ ನಡೆಸಲು, ಶಿಕ್ಷಣ, ಉದ್ಯೋಗ ಹಾಗೂ ದೈನಂದಿನ ಚಟುವಟಿಕೆಗಳಲ್ಲಿ ಸುಲಭವಾಗಿ ತೊಡಗಿಸಿಕೊಳ್ಳಲು ಇಂತಹ ಸಹಾಯಕ ಸಾಧನಗಳು ಮಹತ್ವದ ಪಾತ್ರ ವಹಿಸುತ್ತವೆ. ವಿಶೇಷ ಚೇತನರ ಅಗತ್ಯಗಳನ್ನು ಗುರುತಿಸಿ ಅವರಿಗೆ ಅಗತ್ಯ ನೆರವು ಒದಗಿಸುವುದು ಸಮಾಜದ ಜವಾಬ್ದಾರಿ ಎಂದು ಶಾಸಕರು ತಿಳಿಸಿದರು

ಸರ್ಕಾರದ ವಿವಿಧ ಯೋಜನೆಗಳು ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಮೂಲಕ ಅರ್ಹ ಫಲಾನುಭವಿಗಳಿಗೆ ಅಗತ್ಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಸಮಾಜದ ಪ್ರತಿಯೊಬ್ಬರೂ ಗೌರವಯುತ ವಾಗಿ ಮತ್ತು ಸ್ವಾವಲಂಬನೆಯಿಂದ ಬದುಕಲು ಪೂರಕ ವಾತಾವರಣ ನಿರ್ಮಿಸುವುದು ಇಂತಹ ಕಾರ್ಯಕ್ರಮಗಳ ಆಶಯವಾಗಿದೆ ಎಂದರು. ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳಿದ್ದರು.