<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ತಿಂಗಳ ಒಳಗೆ ಜಗಜೀವನರಾಂ ಭವನ ಕಾಮಗಾರಿ ಪೂರ್ಣಗೊಳಿಸಲು ಡಿಸಿ ಸೂಚನೆ

Banner Ad
ತಿಂಗಳ ಒಳಗೆ ಜಗಜೀವನರಾಂ ಭವನ ಕಾಮಗಾರಿ ಪೂರ್ಣಗೊಳಿಸಲು ಡಿಸಿ ಸೂಚನೆ

ಶಿವಮೊಗ್ಗ :- ಹಸಿರು ಕ್ರಾಂತಿ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್‌ರವರ ಜಯಂತಿಯನ್ನು ಏ. 5 ರಂದು ಕುವೆಂಪು ರಂಗಮAದಿರದಲ್ಲಿ ಮತ್ತು ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರ ಜಯಂತಿಯನ್ನು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

ಏ.5 ರಂದು ಡಾ.ಬಾಬು ಜಗಜೀವನರಾಂ ಮತ್ತು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್‌ರವರ ಜನ್ಮ ದಿನಾಚರಣೆ ಕಾರ್ಯಕ್ರಮದ ಕುರಿತು ಚರ್ಚಿಸಲು ಮಂಗಳವಾರ ಜಿಲ್ಲಾಡಳಿತ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ವಿತರಣೆ ಮಾಡುವಂತೆ ಹಾಗೂ ಪ್ರಚಾರಕ್ಕಾಗಿ ನಗರದ ಮುಖ್ಯ ಭಾಗಗಳಲ್ಲಿ ಫೆಕ್ಸ್ಗಳನ್ನು ಅಳವಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೂವಿನ ಅಲಂಕಾರ, ವೇದಿಕೆ, ವಿದ್ಯುತ್, ಕುಡಿಯುವ ನೀರು, ಲಘು ಉಪಹಾರ, ಪೊಲೀಸ್ ಬಂದೋಬಸ್ತ್, ಕಲಾತಂಡಗಳು, ಕಿರುಹೊತ್ತಿಗೆ ವಿತರಣೆ ಸೇರಿದಂತೆ ಎಲ್ಲ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೆರವಣಿಗೆ : ಡಾ.ಬಾಬು ಜಗಜೀವನರಾಂ ಜಯಂತಿಯAದು ಸೈನ್ಸ್ ಮೈದಾನದಿಂದ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯAದು ಪಾಲಿಕೆಯಿಂದ ಈ ಮಹಾತ್ಮರ ಭಾವಚಿತ್ರಗಳನ್ನು ಮೆರವಣಿಗೆ ಮೂಲಕ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬಂದು ಸೇರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಪ್ರತಿಭಾ ಪುರಸ್ಕಾರ ಮತ್ತು ಹೋರಾಟಗಾರರಿಗೆ ಸನ್ಮಾನ : ಮಹಾತ್ಮರ ಜನ್ಮ ದಿನಾಚರಣೆಯಂದು ಅತಿ ಹೆಚ್ಚು ಅಂಕ ಗಳಿಸಿದ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಮುದಾಯಗಳ ಪರವಾಗಿ ಹೋರಾಟ ಮಾಡಿದ ಹೋರಾಟಗಾರರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಇಬ್ಬರು ಮಹನೀಯರ ಜಯಂತಿ ವೇದಿಕೆ ಕಾರ್ಯಕ್ರಮಗಳು ಬೆಳಿಗ್ಗೆ 11 ಕ್ಕೆ ನಡೆಸಲಾಗುವುದು. ಮುಖಂಡರ ಸಲಹೆಯಂತೆ ಉಪನ್ಯಾಸಕರನ್ನು ಆಯ್ಕೆ ಮಾಡಲಾಗುವುದು ಎಂದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *