ಶಿವಮೊಗ್ಗ :- ಭದ್ರಾವತಿಯಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳು ಕೇಳಿಬಂದಿರುವ ಬಗ್ಗೆ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭ ದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂದು ಆರೋಪಿಸ ಲಾಗಿದೆ. ಭದ್ರಾವತಿಯ ತರಿಕೆರೆ ರಸ್ತೆಯಲ್ಲಿರುವ ಗಾಂಧಿ ವೃತ್ತದ ಬಳಿ ರಾತ್ರಿ ಸುಮಾರು ೮ ಗಂಟೆಗೆ ಈ ಘಟನೆ ನಡೆದಿದೆ ಎಂದು ದೂರಲಾಗಿದೆ. ಈ ಕುರಿತ ೧೨ ಸೆಕೆಂಡ್‌ಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಎಸ್‌ಪಿ ಮಿಥುನ್ ಕುಮಾರ್ ವಿಡಿಯೋ ಸಂಬಂಧ ಭದ್ರಾವತಿಯ ಹಳೆನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ (ಸುಮೊಟೊ) ಪ್ರಕರಣ ದಾಖಲಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಲು ಅದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವಿಡಿಯೋ ಎಲ್ಲಿ, ಯಾವಾಗ ಮತ್ತು ಯಾರಿಂದ ರೆಕಾರ್ಡ್ ಆಗಿದೆ ಎಂಬುದರ ಕುರಿತು ತನಿಖೆ ನಡೆಯಲಿದೆ.
ಪ್ರಕರಣದ ತನಿಖೆಗಾಗಿ ಮೂರು ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ಮೂರು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ವಿಡಿಯೋದಲ್ಲಿರುವ ವ್ಯಕ್ತಿಗಳನ್ನು ಗುರುತಿಸುವ ಕಾರ್ಯದಲ್ಲಿ ತೊಡಗಿವೆ. ಈದ್ ಮೆರವಣಿಗೆಯ ವೇಳೆ ರೆಕಾರ್ಡ್ ಆಗಿರುವ ಇತರ ವಿಡಿಯೋಗಳನ್ನೂ ಪರಿಶೀಲಿಸ ಲಾಗುತ್ತಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.


