
ಶಿವಮೊಗ್ಗ :- ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ತೊಂದರೆಗೊಳಗಾದ ಶ್ರೀ ರಾಮನಗರ, ಕೆಂಚಪ್ಪ ಬಡಾವಣೆ ಹಾಗೂ ಶರಾವತಿ ನಗರದ ವಿವಿಧ ಭಾಗಗಳಿಗೆ ಶಾಸಕ ಚನ್ನಬಸಪ್ಪಇಂದು ಬೆಳಿಗ್ಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಬಡಾವಣೆಗಳಲ್ಲಿ ಮಳೆನೀರು ಸರಾಗವಾಗಿ ಹರಿಯದೆ ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಹಾನಿಯಾಗಿರುವುದನ್ನು ಗಮನಿಸಿದ ಶಾಸಕರು, ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಶ್ವತ ಪರಿಹಾರಕ್ಕೆ ಸೂಚನೆ : ಮುಂಬರುವ ಮಳೆಗಾಲದ ವೇಳೆಗೆ ಯಾವುದೇ ಬಡಾವಣೆಯಲ್ಲಿ ನೀರು ನಿಲ್ಲದಂತೆ ರಾಜಕಾಲುವೆ ಹಾಗೂ ಚರಂಡಿಗಳ ದುರಸ್ತಿಯನ್ನು ಕಾರ್ಯವನ್ನು ಕೈಗೊಳ್ಳಬೇಕು. ಹೂಳೆತ್ತುವ ಕಾರ್ಯ ಮಳೆಗಾಲಕ್ಕೂ ಮುನ್ನವೇ ನಗರದ ಪ್ರಮುಖ ಚರಂಡಿಗಳಲ್ಲಿ ಹೂಳೆತ್ತುವ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ತ್ವರಿತ ಸ್ಪಂದನೆ: ಮಳೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ತಕ್ಷಣದ ಪರಿಹಾರ ಕಾರ್ಯಗಳಿಗೆ ವಿಶೇಷ ತಂಡಗಳನ್ನು ರಚಿಸಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಬಡಾವಣೆಯ ಪ್ರಮುಖರಿದ್ದರು.



