<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ವೈಭವದಿಂದ ಜರುಗಿದ ಶಿಕಾರಿಪುರ ಶ್ರೀ ಹುಚ್ಚುರಾಯಸ್ವಾಮಿ ಬ್ರಹ್ಮರಥೋತ್ಸವ

Banner Ad
ವೈಭವದಿಂದ ಜರುಗಿದ ಶಿಕಾರಿಪುರ ಶ್ರೀ ಹುಚ್ಚುರಾಯಸ್ವಾಮಿ ಬ್ರಹ್ಮರಥೋತ್ಸವ

ಶಿಕಾರಿಪುರ :- ಇತಿಹಾಸ ಪ್ರಸಿದ್ದ ಶ್ರೀ ಹುಚ್ಚುರಾಯಸ್ವಾಮಿ ಬ್ರಹ್ಮರಥೋತ್ಸವ ನಾಡಿನ ಮೂಲೆ ಮೂಲೆಯಿಂದ ಆಗಮಿಸಿದ ಸಹಸ್ರಾರು ಭಕ್ತರ ಸಮಕ್ಷಮದಲ್ಲಿ ಜೈ ಆಂಜನೇಯ, ಜೈ ಭಜರಂಗಿ ಗೋವಿಂದನ ನಾಮಸ್ಮರಣೆಯೊಂದಿಗೆ ಗುರುವಾರ ಬೆಳಿಗ್ಗೆ ಅತ್ಯಂತ ವಿಜೃಂಭಣೆಯಿಂದ ಜರುಗಿತು.

ರಥೋತ್ಸವಕ್ಕೆ ಶ್ರೀಹರಿಯ ವಾಹನವಾಗಿ ಪುರಾಣಗಳಲ್ಲಿ ಅತ್ಯಂತ ವಿಶಿಷ್ಟವಾಗಿ ಗುರುತಿಸಿಕೊಂಡ ಗರುಡ ಮೂರು ಪ್ರದಕ್ಷಿಣೆ ಮೂಲಕ ನೆರೆದಿದ್ದ ಭಕ್ತಾಧಿಗಳಿಗೆ ಅಚ್ಚರಿಯನ್ನು ಉಂಟು ಮಾಡಿತು.ಕಳೆದ ಹಲವು ವರ್ಷಗಳಿಂದ ಗರುಡ ಪ್ರದಕ್ಷಿಣೆ ಮೂಲಕ ರಥೋತ್ಸವಕ್ಕೆ ಚಾಲನೆ ದೊರೆಯುತ್ತಿದ್ದು ಈ ಬಾರಿ ಸಹ ಪುನರಾವರ್ತನೆಯಾಗಿದ್ದು ಇಂತಹ ಸುಸಂದರ್ಬವನ್ನು ಖುದ್ದು ವೀಕ್ಷಿಸಿದ ಭಕ್ತಾಧಿಗಳಲ್ಲಿ ಧನ್ಯತಾ ಬಾವ ಎದ್ದು ಕಾಣುತ್ತಿತ್ತು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಪುತ್ರ ಸಂಸದ ರಾಘವೇಂದ್ರ ಹಾಗೂ ಶಾಸಕ ವಿಜಯೇಂದ್ರ ಹಾಗೂ ಕುಟುಂಬಸ್ಥರ ಜೊತೆ ಬೆಳಿಗಿನ ಜಾವ ದೇವಸ್ಥಾನಕ್ಕೆ ಆಗಮಿಸಿ ರಥೋತ್ಸವದ ಅಂಗವಾಗಿ ನಡೆದ ಎಲ್ಲ ಧಾರ್ಮಿಕ ವಿಧಿ ವಿಧಾನ ಪೂಜ ಕಾರ್ಯಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡರು. ಈ ಸಂದರ್ಬದಲ್ಲಿ ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ ಮತ್ತಿತರರು ಹಾಜರಿದ್ದರು. ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಭಕ್ತರಿಗೆ ಪಾನಕ, ಕೋಸಂಬರಿ, ಮಜ್ಜಿಗೆ ವಿತರಿಸಲಾಯಿತು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *