<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ನಾಳೆ ಚಂದನಾ ಪಾರ್ಕ್‌ನಲ್ಲಿ ಬಾಕ್ಸ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

Banner Ad
ನಾಳೆ ಚಂದನಾ ಪಾರ್ಕ್‌ನಲ್ಲಿ ಬಾಕ್ಸ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಶಿವಮೊಗ್ಗ :- ಗೋಪಾಲಗೌಡ ಬಡಾವಣೆಯ ಚಂದನಾ ಆರೋಗ್ಯ ಪಾರ್ಕ್‌ನ ಗೆಳೆಯರ ಬಳಗದ ವತಿಯಿಂದ ಏ.4ರ ನಾಳೆ ಸಂಜೆ 6ಗಂಟೆಗೆ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಆಹ್ವಾನಿತ ತಂಡಗಳ ಬಾಕ್ಸ್ ಕ್ರಿಕೇಟ್ ಪಂದ್ಯಾವಳಿ ನಡೆಯಲಿದೆ.

ಪಂದ್ಯಾವಳಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಚಾಲನೆ ನೀಡಲಿದ್ದು, ಪಾರ್ಕಿನ ಪದಾಧಿಕಾರಿಗಳು, ಸದಸ್ಯರು, ಉದ್ಯಮಿಗಳು, ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸುಮಾರು 10ಕ್ಕೂ ಹೆಚ್ಚು ತಂಡಗಳು ಇದರಲ್ಲಿ ಭಾಗವಹಿಸಲಿದ್ದು, ರಾತ್ರಿಯೂ ಹೊನಲು ಬೆಳಕಲ್ಲಿ ಪಂದ್ಯಾವಳಿ ಮುಂದುವರೆಯಲಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಚಿತ್ರತಂಡದ ಪ್ರಮುಖರು ಕೂಡ ಭಾಗವಹಿಸಲಿದ್ದಾರೆ. ಈಗಾಗಲೇ ಪಂದ್ಯಾವಳಿಯಲ್ಲಿ ಹೆಸರು ನೊಂದಾಯಿಸಿಕೊಂಡಿರುವ ತಂಡಗಳು ನಾಳೆ ಸಂಜೆ ಆಟ ಪ್ರಾರಂಭವಾಗುವ ಅರ್ಧಗಂಟೆ ಮುಂಚೆಯೇ ಹಾಜರಿರಬೇಕು. ತಂಡದವರಿಗೆ ಮತ್ತು ವೀಕ್ಷಕರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು, ಮಹಿಳೆಯರಿಗಾಗಿ ಪ್ರತ್ಯೇಕ ಆಸನದ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ಆಯೋಜಕ ಗುರುರಾಜ್ ಎಲ್. ತಿಳಿಸಿದ್ದಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *