
ಬೆಂಗಳೂರು :- ಪ್ರತಿಷ್ಠಿತ ಎಸೆಸೆಲ್ಸಿ ಪರೀಕ್ಷೆ-1ರ ಮೌಲ್ಯಮಾಪನ ಮುಕ್ತಾಯಗೊಂಡಿದ್ದು, ಎ. 23ರ ನಾಳೆ ಮಧ್ಯಾಹ್ನ 12 ಗಂಟೆಗೆ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಫಲಿತಾಂಶವನ್ನು https://karresults.nic.in ಲಿಂಕ್ ಅಥವಾ KarnatakaOne Mobile App ಮೂಲಕ ಪಡೆಯಬಹುದಾಗಿದೆ.
ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆಪ್/ಎಸ್‍ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಕಳುಹಿಸಲಾಗುತ್ತದೆ.
ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‍ನಲ್ಲಿಯೂ ಅಪ್‍ಲೋಡ್ ಮಾಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿಯನ್ನು https://www.digilocker.gov.in ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಡಿಜಿಲಾಕರ್ ನಿಂದ ಡೌನ್‍ಲೋಡ್ ಮಾಡಿಕೊಳ್ಳಲು ಉಪಯೋಗವಾಗುವ ವಿಡಿಯೋವನ್ನು https:// tinyurl.com/mw84wmh9 ನಲ್ಲಿ ಅಪ್‍ಲೋಡ್ ಮಾಡಲಾಗಿದೆ. ಇನ್ನು ಫಲಿತಾಂಶ ಪಟ್ಟಿಯನ್ನು ಎ. 23ರ ನಾಳೆಯೇ ಸಂಬಂಧಿತ ಶಾಲೆಗಳಿಗೂ ಕಳುಹಿಸಲಾಗುತ್ತದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.


