<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಬಿರುಗಾಳಿ-ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ : ತಕ್ಷಣ ಕ್ರಮಕ್ಕೆ ಸೂಚನೆ

Banner Ad
ಬಿರುಗಾಳಿ-ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ : ತಕ್ಷಣ ಕ್ರಮಕ್ಕೆ ಸೂಚನೆ

ಶಿವಮೊಗ್ಗ :- ಬಿರುಗಾಳಿ ಮತ್ತು ಮಳೆಯಿಂದ ಹಾನಿಗೊಳಗಾದ ಅಡಿಕೆ, ತೆಂಗು ತೋಟ ಸೇರಿದಂತೆ ಬೆಳೆ ಹಾನಿಯಾದ ರೈತರಿಗೆ ಮತ್ತು ಮನೆ ಕಳೆದುಕೊಂಡವರಿಗೆ ತಕ್ಷಣವೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಬೆಳಿಗ್ಗೆ ಗಾಳಿ ಮಳೆ ಹಾನಿಗೊಳಗಾದ ಶಿವಮೊಗ್ಗ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ, ಅರಹತೊಳಲು ಗ್ರಾಮದ ತೋಟಕ್ಕೆ ಭೇಟಿ ನೀಡಿ ಬಿರುಗಾಳಿ ಮತ್ತು ಮಳೆಯಿಂದಾಗಿ ಧರೆಗುರುಳಿದ ಮರಗಳನ್ನು ವೀಕ್ಷಿಸಿ, ಸಂತ್ರಸ್ತ ರೈತರೊಂದಿ ಮಾತನಾಡಿ, ಅಹವಾಲು ಸ್ವೀಕರಿಸಿದರು. ನಂತರ ಅರಹತೊಳಲು ವಡ್ಡರಹಟ್ಟಿಗೆ ತೆರಳಿ ಬಿರುಗಾಳಿಗೆ ಹಾನಿಗೊಳಗಾದ ಮನೆಗಳು, ಕೊಟ್ಟಿಗೆಗಳನ್ನು ವೀಕ್ಷಿಸಿ, ಮನೆಯವರೊಂದಿಗೆ ಮಾತನಾಡಿ, ಅಧಿಕಾರಿಗಳ ಬಳಿ ನಷ್ಟದ ಕುರಿತು ಮಾಹಿತಿ ಪಡೆದುಕೊಂಡು, ತ್ವರಿತ ಪರಿಹಾರಕ್ಕೆ ಕ್ರಮ ವಹಿಸಬೇಕೆಂದು ಸೂಚನೆ ನೀಡುದರು.

ಮಲ್ಲಿಗೇನಹಳ್ಳಿ ಗ್ರಾಮದ ಹಾನಿಗೊಳಗಾದ ಅಡಿಕೆ ತೋಟಗಳನ್ನು ವೀಕ್ಷಿಸಿ ತ್ವರಿತಗತಿಯಲ್ಲಿ ಪರಿಹಾರಕ್ಕೆ ಸೂಚಿಸಿದರು. ವಿದ್ಯುತ್ ಕಡಿತವಾಗಿ ಕುಡಿಯುವ ನೀರಿಗೆ ತೊಂದರೆಯಾಗಿದ್ದು ತಕ್ಷಣವೇ ಕುಡಿಯುವ ನೀರು ಮತ್ತು ೩೬ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ನೀಡುವಂತೆ ಮೆಸ್ಕಾಂಗೆ ಸೂಚನೆ ನೀಡಿದ್ದೇನೆ. ಅರಹತೊಳಲಿನಲ್ಲಿ ಓರ್ವ ವ್ಯಕ್ತಿ ಸಾವು ಆಗಿದ್ದು ಕಾರಣ ತಿಳಿದು ವರದಿ ನೀಡಲು ಸೂಚನೆ ನೀಡಿದ್ದೇನೆ. ನಷ್ಟದ ಕುರಿತು ಸಮಗ್ರ ವರದಿ ನೀಡುವಂತೆ ಕಂದಾಯ ಇಲಾಖೆ, ಗ್ರಾ.ಪಂ. ವಿಪತ್ತು ನಿರ್ವಹಣೆ ಇಲಾಖೆ ಸೇರಿದಂತೆ ಸಮನ್ವಯ ಸಾಧಿಸಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟೆ, ಜಿ.ಪಂ. ಸಿಇಓ ಹೇಮಂತ್ ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಎ.ಸಿ. ಸತ್ಯನಾರಾಯಣ, ತಹಶಿಲ್ದಾರರು, ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *